ಗದಗ: ಕಾಂಗ್ರೆಸ್ ಸರ್ಕಾರದಲ್ಲಿ ಕೇವಲ ಗ್ಯಾರಂಟಿ ಯೋಜನೆಗಳಿಗೆ ಅಷ್ಟೇ ಅಲ್ಲ, ಯಾವುದೇ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ.
ಗದಗದಲ್ಲಿ ಇಂದು(ಫೆಬ್ರವರಿ.21) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳು ರಾಜಕೀಯ ಲಾಭಕ್ಕಾಗಿ ಮಾಡಿದ ಯೋಜನೆಯಾಗಿದೆ. ಸಾರ್ವಜನಿಕರು ಮತ್ತು ತಾಯಂದಿರ ಕಣ್ಣಲ್ಲಿ ಮಣ್ಣು ಹಾಕುವ ಯೋಜನೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರ ಮಹಿಳೆಯರಿಗೆ ಗೌರವ ಧನ ನೀಡಲು ವಿಫಲವಾಗಿದೆ. ಈ ಹಣ ಯಾವ ತಿಂಗಳು ಸಹ ಅವರಗೆ ಬಂದಿಲ್ಲ. ಅಲ್ಲದೇ ರಾಜ್ಯ ಸರ್ಕಾರದ ಹಣಕಾಸಿನ ವ್ಯವಸ್ಥೆ ಸಂಪೂರ್ಣ ನೆಲ ಕಚ್ಚಿದ್ದು,
ಗೃಹಲಕ್ಷ್ಮೀ ಹಣವನ್ನು ಅದೇನೂ ತಿಂಗಳ ಸಂಬಳವೇ ಎಂದು ಕಾಂಗ್ರೆಸ್‌ನ ಸಚಿವರೇ ಪ್ರಶ್ನಿಸುತ್ತಾರೆ. ಆದರೆ ಆ ಹಣ ಗೌರವ ಧನವಾಗಿದ್ದು, ಪ್ರತಿ ತಿಂಗಳು ಹಣ ನೀಡಿಲ್ಲ ಎಂದರೆ ಗೌರವ ಧನ ನೀಡಿಲ್ಲ ಎಂದರ್ಥ ಎಂದು ಹೇಳಿದರು.
ಇನ್ನು ರಾಜ್ಯದಲ್ಲಿ ದೈನಂದಿನ ಬಳಕೆಯ ವಸ್ತುಗಳ ಮೇಲೆ ಬೆಲೆ ಏರಿಕೆಯಾಗಿದೆ. ಆದರೆ ರಾಜ್ಯ ಸರ್ಕಾರ ಮಮಾತ್ರ ತೆರಿಗೆ ರೂಪದಲ್ಲ ಹಣ ಪಡೆದು ಅದನ್ನೇ ಗ್ಯಾರಂಟಿ ರೂಪದಲ್ಲಿ ಮರಳಿ ಕೊಡಲು ಮುಂದಾಗಿದೆ. ಹೀಗಿದ್ದರೂ ಸಿಎಂ ಸಿದ್ದರಾಮಯ್ಯ ತಮ್ಮ ಭಂಡತನವನ್ನು ಪ್ರದರ್ಶನ ಮಾಡಿ ರಾಜ್ಯ ಸರ್ಕಾರದ ವಿಫಲತೆ ಒಪ್ಪಿಕೊಳ್ಳುತ್ತಿಲ್ಲ ಎಂದು ವಾಗ್ದಾಳ ನಡೆಸಿದರು.
ಎಸ್.ಎಸ್.ಭಟ್ ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ…
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…