ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಉಪಸಭಾಪತಿ ಪ್ರಾಣೇಶ್ ಅವರಿಗೆ ಪತ್ರ ರವಾನಿಸಿದ್ದಾರೆ.
ವೈಯಕ್ತಿಕ ಕಾರಣಗಳಿಂದ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಮಾರ್ಚ್.31ರ ಒಳಗೆ ಸ್ವೀಕರಿಸಬೇಕು. ಏಪ್ರಿಲ್.1ರಿಂದ ಅನ್ವಯವಾಗುವಂತೆ ಕ್ರಮ ಕೈಗೊಂಡು ನನ್ನನ್ನು ಈ ಹುದ್ದೆಯಿಂದ ಮುಕ್ತಿಗೊಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.





