ಗದಗ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟು ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ನ್ಯಾಯಾದೀಶರ ನೇತೃತ್ವದಲ್ಲಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಹೇಳುತ್ತಾರೆ. ಹಾಗಾದರೇ ಅವರು ಈ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸಬೇಕು ಎಂದರು.
ಸಿಬಿಐ ಅಥವಾ ನ್ಯಾಯಾಧೀಶರ ತನಿಖೆಯಿಂದ ಯಾವುದೇ ಅಕ್ರಮ ನಡೆದಿದ್ದರೂ ಹೊರ ಬರುತ್ತದೆ ಎಂದೂ ಅವರು ಹೇಳಿದರು.
ಇನ್ನು ಡೆಂಗಿ ಎದುರಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಬಡವರ ಜೀವದ ಜತೆಯಲ್ಲಿ ಚೆಲ್ಲಾಟ ಆಡುತ್ತಿದೆ. ಡೆಂಗಿ ಪ್ರಕರಣಗಳು ರಾಜ್ಯಾದ್ಯಂತ ಹರಡುತ್ತಿದ್ದು, ಈವರೆಗೆ ಸರ್ಕಾರ ಯಾವುದೇ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿಲ್ಲ. ಹೊಸ ಮಳೆ ಬಂದಾಗ ನಿಂತ ನೀರಿನಿಂದ ಬರುವ ರೋಗ ಇದಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಲಸ ಸರ್ಕಾರ ಮಾಡಬೇಕಿದೆ ಎಂದರು.
ಈ ರೋಗದಿಂದ ಹಲವಾರು ಸಾವು-ನೋವುಗಳಾಗಿದ್ದು, ರಾಜ್ಯದಲ್ಲಿ ಚಿಂತಾಜನಕ ಸ್ಥಿತಿ ಎದುರಾಗಿದೆ. ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಡೆಂಗಿ ಟೆಸ್ಟ್, ಸಮರ್ಪಕ ಔಷಧ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ಪ್ರಾಥಾಮಿಕ ಹಂತದಲ್ಲಿಯೇ ಡೆಂಗಿಯನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಬೊಮ್ಮಾಯಿ ಸಲಹೆ ನೀಡಿದರು.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…