ರಾಜ್ಯ

ಆಧಾರವಿಲ್ಲದ ಆರೋಪ ಸಲ್ಲದು : ಸಿಎಂ ಸಿದ್ದರಾಮಯ್ಯ

ಆರೋಪ ಮಾಡಿದರೆ ಸಾಬೀತು ಮಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ 60% ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿರುವ ಬಗ್ಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ
ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ,ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ:ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ
ಕೆಪಿಸಿಸಿ, ಮುಖ್ಯಮಂತ್ರಿಗಳ ಬದಲಾವಣೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಈ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

ಖಾಲಿ ಇರುವ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.

ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ಸಿದ್ದ
ಜಿಲ್ಲಾ ಮತ್ತು ತಾಲ್ಲೂಕು ಪಂಚಾತಿಗಳು ಚುನಾವಣೆಗಳು ನಡೆದು ಐದು ವರ್ಷಗಳಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ವಿಷಯ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ ಎಂದರು.

ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ
ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ರಾಜಕೀಯ ಚರ್ಚೆ ನಡೆದಿಲ್ಲ
ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಹಲವು ಸಚಿವರು ಸಭೆ ಸೇರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಊಟಕ್ಕೆ ಸೇರುವುದೇ ತಪ್ಪೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೆಂದು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬಜೆಟ್ ನಲ್ಲಿ ಘೋಷಿಸಲಾಗಿತ್ತು ಎಂಬುದಕ್ಕೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಮಾರ್ಚ್ ನಲ್ಲಿ ಬಜೆಟ್ ಮಂಡನೆ
ಈ ಬಾರಿಯ ಬಜೆಟ್ ನ್ನು ಮಾರ್ಚ್ ನಲ್ಲಿ ಮಂಡನೆ ಆಗಲಿದೆ. ಆಯವ್ಯಯ ಪೂರ್ವಭಾವಿ ಚರ್ಚೆ ಪ್ರಾರಂಭವಾದ ನಂತರ ದಿನಾಂಕವನ್ನು ತಿಳಿಸಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

34 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

38 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

43 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

49 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago