Mysore
19
scattered clouds
Light
Dark

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ ಗೆ ಡೆಂಗ್ಯೂ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಉಲ್ಬಣಗೊಳ್ಳುತ್ತಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಡೆಂಗ್ಯೂ ರೋಗದಿಂದ ಬಳಲುತ್ತಿರುವ ಜನರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರಿಗೂ ಕೂಡ ಡೆಂಗ್ಯೂ ರೋಗ ಕಾಣಿಸಿಕೊಂಡಿದ್ದು, ಕಳೆದ ನಾಲ್ಕು ದಿನಗಳಿಂದ ಮನೆಯಲ್ಲೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಜೂನ್​ 22 ರವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಗಳು ಕಾಣಿಸಿಕೊಂಡಿದ್ದವು. ರಾಜಧಾನಿಯಲ್ಲೂ ಕೂಡ ಜನರಿಗೆ ನೆಗಡಿ-ಜ್ವರ ಹೆಚ್ಚಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆರು ತಿಂಗಳಲ್ಲಿ ಒಟ್ಟು 1,230 ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಜನವರಿಯಿಂದ 3975 ಕೇಸ್ ಪತ್ತೆ ಆಗಿದ್ದು, ಜೂನ್ ತಿಂಗಳಿನಿಂದ ಕೇಸ್​ಗಳ ಸಂಖ್ಯೆ ಏರಿಕೆ ಕಂಡು ಬಂದಿದೆ.

ಇನ್ನು ರಾಜ್ಯದಲ್ಲಿ ಒಟ್ಟು 37144 ಜನರ ರಕ್ತ ಮಾದರಿಯನ್ನು ಪಡೆಯಲಾಗಿತ್ತು. ಇದರಲ್ಲಿ 3957 ಜನರಿಗೆ ಡೆಂಗ್ಯೂ ಪಾಸಿಟಿವ್ ಬಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೂ ಕೂಡ 4063 ಜನರ ಸ್ಯಾಂಪಲ್ಸ್ ಗಳನ್ನು ಸಂಗ್ರಹ ಮಾಡಲಾಗಿದ್ದು, ಈ ಪೈಕಿ 1230 ಜನರಲ್ಲಿ ಡೆಂಗ್ಯೂ ಪಾಸಿಟಿವ್​ ಕಾಣಿಸಿಕೊಂಡಿತ್ತು. ಇಲ್ಲಿಯವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಗಳು ಪತ್ತೆಯಾಗಿವೆ.