ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಉಲ್ಬಣಗೊಳ್ಳುತ್ತಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಡೆಂಗ್ಯೂ ರೋಗದಿಂದ ಬಳಲುತ್ತಿರುವ ಜನರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೂ ಕೂಡ ಡೆಂಗ್ಯೂ ರೋಗ ಕಾಣಿಸಿಕೊಂಡಿದ್ದು, ಕಳೆದ ನಾಲ್ಕು ದಿನಗಳಿಂದ ಮನೆಯಲ್ಲೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಜೂನ್ 22 ರವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಗಳು ಕಾಣಿಸಿಕೊಂಡಿದ್ದವು. ರಾಜಧಾನಿಯಲ್ಲೂ ಕೂಡ ಜನರಿಗೆ ನೆಗಡಿ-ಜ್ವರ ಹೆಚ್ಚಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆರು ತಿಂಗಳಲ್ಲಿ ಒಟ್ಟು 1,230 ಪ್ರಕರಣಗಳು ಪತ್ತೆಯಾಗಿದೆ. ರಾಜ್ಯದಲ್ಲಿ ಜನವರಿಯಿಂದ 3975 ಕೇಸ್ ಪತ್ತೆ ಆಗಿದ್ದು, ಜೂನ್ ತಿಂಗಳಿನಿಂದ ಕೇಸ್ಗಳ ಸಂಖ್ಯೆ ಏರಿಕೆ ಕಂಡು ಬಂದಿದೆ.
ಇನ್ನು ರಾಜ್ಯದಲ್ಲಿ ಒಟ್ಟು 37144 ಜನರ ರಕ್ತ ಮಾದರಿಯನ್ನು ಪಡೆಯಲಾಗಿತ್ತು. ಇದರಲ್ಲಿ 3957 ಜನರಿಗೆ ಡೆಂಗ್ಯೂ ಪಾಸಿಟಿವ್ ಬಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೂ ಕೂಡ 4063 ಜನರ ಸ್ಯಾಂಪಲ್ಸ್ ಗಳನ್ನು ಸಂಗ್ರಹ ಮಾಡಲಾಗಿದ್ದು, ಈ ಪೈಕಿ 1230 ಜನರಲ್ಲಿ ಡೆಂಗ್ಯೂ ಪಾಸಿಟಿವ್ ಕಾಣಿಸಿಕೊಂಡಿತ್ತು. ಇಲ್ಲಿಯವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಗಳು ಪತ್ತೆಯಾಗಿವೆ.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…