ರಾಜ್ಯ

ಕಂಬಳಕ್ಕೆ ಶಾಕ್‌ ಕೊಟ್ಟ ಬಿಬಿಎಂಪಿ!

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯುವ ಅದ್ದೂರಿ ಕಂಬಳ ಮಹೋತ್ಸವಕ್ಕೆ ಅಶ್ವಿನ್ ಪುನೀತ್ ರಾಜ್​ಕುಮಾರ್ ಅವರು ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಕಂಬಳ ಪ್ರೇಮಿಗಳು ಕಂಬಳದಲ್ಲಿ ಭಾಗವಹಿಸಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಕಂಬಳ ಸ್ಪರ್ಧೆ ಶುರುವಾಗಿದ್ದು, ಕೋಣಗಳ ಓಟದ ರೋಮಾಂಚನಕಾರಿ ದೃಶ್ಯವನ್ನು ವೀಕ್ಷಕರು ಕಣ್ತುಂಬಿಕೊಳ್ಳುತ್ತಿದ್ದಾರೆ.

ಈ ಮಧ್ಯೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಂಬಳ ಆಯೋಜಕರಿಗೆ ಬಿಗ್ ಶಾಕ್ ನೀಡಿದೆ. ಅರಮನೆ ಮೈದಾನದ ಮುಂದೆ ಫ್ಲೈಕ್ಸ್, ಬ್ಯಾನರ್ ಹಾಕಿದ್ದಕ್ಕೆ‌ ಕಂಬಳ ಆಯೋಜಕರಿಗೆ 50 ಸಾವಿರ ರೂ. ದಂಡ ವಿಧಿಸಿದೆ. ಇದಲ್ಲದೇ ಆಯೋಜಕರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಬಿಬಿಎಂಪಿ ದೂರು ನೀಡಿದೆ. ಕಂಬಳಕ್ಕೆ ಶುಭಾಶಯ ಕೋರಿ ಹಾಕಿದ್ದ ಬ್ಯಾನರ್​​, ಸೇರಿದಂತೆ ಎಲ್ಲಾ ಬ್ಯಾನರ್​ಗಳನ್ನು ತೆರವುಗೊಳಿಸಲಾಗಿದೆ.

ವಾಹನ ನಿಲುಗಡೆಗೆ ಹೆಚ್ಚಿನ ಶುಲ್ಕ: ಸಾರ್ವಜನಿಕರ ಅಸಮಧಾನ
ಕಂಬಳ ವೀಕ್ಷಿಸಲು ಜನ ಸಾಗರವೇ ಹರಿದು ಬರುತ್ತಿದೆ. ಈ ವೇಳೆ ವಾಹನ ನಿಲುಗಡೆಗೆ ಬರೋಬ್ಬರಿ ೧೫೦ರೂ. ಶುಲ್ಕ ವಿಧಿಸಲಾಗುತ್ತಿದ್ದು, ಕಂಬಳ ವಿಕ್ಷಿಸಲು ಬಂದ ಸಾರ್ವಜನಿಕರು ಈ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

32 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago