ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ರಾಜಭವನ, ವಿಧಾನಸೌಧ ಮತ್ತು ವಿಕಾಸಸೌಧ ಸೇರಿದಂತೆ ಒಟ್ಟು 258 ಸರ್ಕಾರಿ ಕಟ್ಟಡಗಳಿಗೆ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ನೋಟಿಸ್ ಜಾರಿ ಮಾಡಿದೆ.
ಸುಮಾರು 17 ವರ್ಷಗಳಿಂದ ಕೆಲವು ಇಲಾಖೆಗಳು ಸುಸ್ತಿದಾರರಾಗಿದ್ದಾರೆಂದು ವರದಿಯಾಗಿದ್ದು, ಅಂದಾಜು 658 ಕೋಟಿ ರೂ.ಗಳಷ್ಟು ತೆರಿಗೆ ಬಾಕಿ ಹಣವನ್ನು ಪಾವತಿಸದೇ ಹಾಗೆಯೇ ಉಳಿಸಿಕೊಂಡಿದ್ದಾರೆ.
ನಾಗರೀಕ ಸಂಸ್ಥೆ ತನ್ನ ಆದಾಯವನ್ನು ಹೆಚ್ಚು ಮಾಡಿಕೊಳ್ಳಲು ಹೆಣಗಾಡುತ್ತಿರುವಾಗ, ಎಲ್ಲಾ ತೆರಿಗೆ ಸುಸ್ತಿದಾರರ ವಿರುದ್ಧ ಅವರ ಸ್ಥಾನಮಾನವನ್ನು ಲೆಕ್ಕಿಸದೆ ಕಠಿಣ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಗರೀಕ ಸಂಸ್ಥೆಯು ಒನ್ ಟೈಮ್ ಸೆಟಲ್ಮೆಂಟ್ (ಒಟಿಎಸ್) ಯೋಜನೆಯನ್ನು ಪರಿಚಯಿಸಿತ್ತು. ಈ ಯೋಜನೆಯೂ ಬಾಕಿಗಳ ಮೇಲಿನ ಚಕ್ರಬಡ್ಡಿಯನ್ನು ಮನ್ನಾ ಮಾಡಿತ್ತು. ಅಲ್ಲದೇ ಪಾವತಿಗಳನ್ನು ಉತ್ತೇಜಿಸಲು ದಂಡವನ್ನು ಶೇ.50 ರಷ್ಟು ಕಡಿಮೆ ಮಾಡಿತ್ತು. ಇದು ಸರ್ಕಾರಿ ಕಚೇರಿಗಳಿಗೂ ಮುಕ್ತವಾಗಿತ್ತು. ಆದರೆ ಈ ಯೋಜನೆ ಮುಗಿಯುವ ಮುನ್ನ ಯಾರೂ ಇದರ ಪ್ರಯೋಜನಗಳನ್ನು ಪಡೆಯಲಿಲ್ಲ.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…