ರಾಜ್ಯ

ಆಸ್ತಿ ತೆರಿಗೆ ಬಾಕಿ| ರಾಜಭವನ, ವಿಧಾನಸೌಧ ಸೇರಿದಂತೆ 258 ಸರ್ಕಾರಿ ಕಟ್ಟಡಗಳಿಗೆ ನೋಟಿಸ್‌: ಬಿಬಿಎಂಪಿ

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಕಾರಣ ರಾಜಭವನ, ವಿಧಾನಸೌಧ ಸೇರಿದಂತೆ ಒಟ್ಟು 258 ಸರ್ಕಾರ ಕಟ್ಟಡಗಳಿಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ನೋಟಿಸ್‌ ನೀಡಿದೆ.

ರಾಜ್ಯಾದ್ಯಂತ ಬಹುತೇಕ ಸರ್ಕಾರಿ ಇಲಾಖೆಗಳು ಸುಮಾರು 8 ಸಾವಿರ ಕೋಟಿ ರೂ.ಗಳಷ್ಟು ವಿದ್ಯುತ್‌ ಬಿಲ್‌ ಪಾವತಿಸದೇ ಬಾಕಿ ಉಳಿಸಿಕೊಂಡಿವೆ. ಇದರ ಬೆನ್ನಲ್ಲೇ ರಾಜಭವನ, ವಿಧಾನಸೌಧ ಮತ್ತು ವಿಕಾಸಸೌಧ ರಾಜಭವನ ಸೇರಿದಂತೆ 258 ಸರ್ಕಾರಿ ಕಟ್ಟಡಗಳು ಕೋಟಿಗಟ್ಟಲೆ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಕಾರಣ ನೋಟಿಸ್‌ ನೀಡಲಾಗಿದೆ. ಅಲ್ಲದೇ ಆ ಕಟ್ಟಡಗಳಲ್ಲಿ ಕೆಲವು ಸರ್ಕಾರಿ ಕಚೇರಿಗಳು 17 ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿವೆ. ಹೀಗಾಗಿ ಆಯಾ ಇಲಾಖೆ ಮುಖ್ಯಸ್ಥರಿಗೆ ತೆರಿಗೆ ಪಾವತಿಸುವಂತೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ನೋಟಿಸ್‌ನಲ್ಲಿ ನೀಡಿರುವ ಕಾಲಾವಧಿಯೊಳಗೆ ತೆರಿಗೆ ಪಾವತಿ ಮಾಡದಿದ್ದರೆ, ಸರ್ಕಾರದ ಗಮನಕ್ಕೆ ತಂದು ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…

41 seconds ago

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…

26 mins ago

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

1 hour ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

1 hour ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

1 hour ago

ಒಂದೇ ಒಂದು ಮಗುವಿದ್ದರೂ ಕೂಡ ಕನ್ನಡ ಶಾಲೆ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…

2 hours ago