Mysore
24
overcast clouds

Social Media

ಭಾನುವಾರ, 10 ಮೇ 2026
Light
Dark

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವ ಮುನ್ನ ಎಚ್ಚರ: ಈ ಪ್ರವಾಸಿ ತಾಣಗಳಿಗೆ ಎರಡು ದಿನ ನಿರ್ಬಂಧ

trip

ಚಿಕ್ಕಮಗಳೂರು: ಇಲ್ಲಿನ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ಎರಡು ದಿನಗಳ ಕಾಲ ಅಂದರೆ ಇಂದು ಹಾಗೂ ನಾಳೆ ನಿರ್ಬಂಧ ಹೇರಲಾಗಿದೆ.

ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ಸ್ಥಳೀಯರು ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿಯಲ್ಲಿರುವ ಮುಳ್ಳಪ್ಪಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ನೆರವೇರಿಸುತ್ತಾರೆ.

ಹೀಗಾಗಿ ಪ್ರವಾಸಿಗರ ದಟ್ಟಣೆಯಿಂದ ಪೂಜೆ ವಿಳಂಬವಾಗಬಾರದು ಎಂಬ ಕಾರಣಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಅವರು ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.

Tags:
error: Content is protected !!