ರಾಜ್ಯ

ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ; ತಂದೆಗೆ ಕರೆ ಮಾಡಿ ಸ್ವತಃ ವಿಷಯ ತಿಳಿಸಿದ ಮಗ!

ಬೆಂಗಳೂರು ಉತ್ತರ ತಾಲೂಕಿನ ಭವಾನಿನಗರದ ನಿವಾಸಿ, ಕೊಡಗು ಮೂಲದ ವಿಶು ಉತ್ತಪ್ಪ ಎಂಬ ವಿದ್ಯಾರ್ಥಿ ಎದೆ ಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 19 ವರ್ಷದ ವಿಶು ಉತ್ತಪ್ಪ ತನ್ನ ಕುಟುಂಬದವರ ಜತೆ ಕಳೆದ 15 ವರ್ಷಗಳಿಂದ ಭವಾನಿ ನಗರದಲ್ಲಿ ವಾಸವಿದ್ದು, ತಂದೆ ರೇಷನ್‌ ತರಲು ಹೋದಾಗ ಎದೆಗೆ ಗುಂಡು ಹಾರಿಸಿಕೊಂಡಿದ್ದಾನೆ.

ಇನ್ನು ತಾನು ಗುಂಡು ಹಾರಿಸಿಕೊಂಡ ವಿಷಯವನ್ನು ತಾನೇ ತನ್ನ ತಂದಗೆ ಕರೆ ಮಾಡಿ ವಿಶು ಉತ್ತಪ್ಪ ತಿಳಿಸಿದ್ದು, ತಂದೆ ಮನೆಗೆ ಬರುತ್ತಿದ್ದಂತೆ ಬಾಗಿಲು ತೆರೆದು ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇನ್ನು ತಂದೆಗೆ ಕರೆ ಮಾಡಿ ತಾನು ಗುಂಡು ಹಾರಿಸಿಕೊಂಡ ವಿಷಯ ತಿಳಿಸಿದ ವಿಶು ಉತ್ತಪ್ಪ ಇನ್ನುಮುಂದೆ ತಾನು ತಪ್ಪು ಮಾಡುವುದಿಲ್ಲ ಎಂಬ ಮಾತನ್ನೂ ಸಹ ಹೇಳಿದ್ದನಂತೆ. ಮೃತನ ತಂದೆ ನೈಸ್‌ ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದು, ಮೃತ ವಿಶು ಎಂಟನೇ ಮೈಲಿ ಸಮೀಪದ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ವಿಶೇಷ ಸೂಚನೆ: ಆತ್ಮಹತ್ಯೆ ಮಾಡಿಕೊಳ್ಳುವುದು ಎಲ್ಲಾ ಕಷ್ಟಗಳಿಗೂ ಪರಿಹಾರವಲ್ಲ. ಸಮಸ್ಯೆ ಏನೇ ಇದ್ದರೂ ಹತ್ತಿರದವರ ಜತೆ ಮಾತನಾಡಿ ಬಗೆಹರಿಸಿಕೊಳ್ಳಲು ಯತ್ನಿಸಿ. ಇಲ್ಲವಾದರೆ ಈ ಸಹಾಯವಾಣಿಗೆ ಕರೆ ಮಾಡಿ: 9152987821

andolana

Recent Posts

ಮಹಾಪಂಚ್ ಕಾರ್ಟೂನ್

ಮಹಾಪಂಚ್ ಕಾರ್ಟೂನ್ | ಡಿಸೆಂಬರ್ 13 ಶನಿವಾರ  

43 mins ago

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

14 hours ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

14 hours ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

14 hours ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

14 hours ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

14 hours ago