ರಾಜ್ಯ

ದರ ಹೆಚ್ಚಳ ; ಅಬಕಾರಿ ಆದಾಯಕ್ಕೆ ಪೆಟ್ಟು : ಅಶೋಕ್‌ ಆರೋಪ

ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ.

ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ ಮಾರ್ಗ ಉದ್ಯಮಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದರ ಮತ್ತು ಸನ್ನದು ಶುಲ್ಕ ಏರಿಕೆಗೂ ಒಂದು ಮಾನದಂಡ ಇರುತ್ತದೆ. ಆದರೆ ಒಂದೇ ವರ್ಷದಲ್ಲಿ ಮದ್ಯ ಮಾರಾಟ ಮತ್ತು ಸನ್ನದು ಶುಲ್ಕವನ್ನು ಅಡ್ಡಾದಿಡ್ಡಿ ಹೆಚ್ಚಿಸುತ್ತಿರುವುದು ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.

ಎಷ್ಟು ಸಲ ಹೆಚ್ಚಳ : ಬಜೆಟ್ ನಲ್ಲಿ ಯಾವುದೇ ತೆರಿಗೆ ಹಾಕಿಲ್ಲ ಎಂದು ಬೆನ್ನು ತಟ್ಟಿಕೊಂಡು ನಂತರದಲ್ಲಿ ಆಲ್ಕೊಹಾಲ್ ದರಗಳನ್ನು ಯದ್ವಾತದ್ವಾ ಹೆಚ್ಚಿಸಿದ್ದಾರೆ. ಅದರಲ್ಲೂ ಬಿಯರ್ ದರವನ್ನು ವರ್ಷದಲ್ಲಿ ಎರಡೂ – ಮೂರು ಸಲ ಹೆಚ್ಚಿಸಲಾಗಿದೆ. ಗ್ರಾಹಕರಿಗೆ ದೊಡ್ಡ ಹೊರೆ ಹೊರಿಸಲಾಗಿದೆ. ಮದ್ಯಪ್ರಿಯರು ಪ್ರತಿಭಟಿಸುವುದಿಲ್ಲ ಎಂಬ ಕಾರಣಕ್ಕೆ ಇಂತಹ ಕ್ರಮ ಅನುಸರಿಸುವುದು ಒಳ್ಳೆಯದಲ್ಲ.

ಸರಿಯಾದ ಆರ್ಥಿಕ ಶಿಸ್ತು ಮತ್ತು ಸಿದ್ಧತೆಗಳಿಲ್ಲದೆ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಇದರಿಂದ ಅಭಿವೃದ್ಧಿ ಕಾರ್ಯಕ್ರಮಗಳು ಸ್ಥಗಿತ ಗೊಂಡಿವೆ. ಬೊಕ್ಕಸ ಬರಿದಾಗಿ ಸರ್ಕಾರ ದಿವಾಳಿಯಾಗಿದೆ.

ಇದನ್ನು ಹೇಗಾದರೂ ಸರಿಪಡಿಸಿಕೊಳ್ಳಲು ಹೆಣಗುತ್ತಿರುವ ಸರ್ಕಾರ, ಸಿಕ್ಕ ಸಿಕ್ಕ ಎಲ್ಲ ವಸ್ತುಗಳ ದರ ಹೆಚ್ಚಳ ಮಾಡಿದೆ. ಆದರೂ ಪರಿಸ್ಥಿತಿ ಸುಧಾರಿಸುತ್ತಿಲ್ಲ. ಹೀಗಾಗಿ ಇಂತಹ ದರ ಮತ್ತು ಶುಲ್ಕ ಹೆಚ್ಚಳದಂತಹ ವಾಮ ಮಾರ್ಗಗಳ ಮೂಲಕ ಸರ್ಕಾರ ಉದ್ಯಮವನ್ನು ಶೋಷಣೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ನೂರು ಪಟ್ಟು ಹೆಚ್ಚಳ: ಮದ್ಯ ಉತ್ಪಾದನೆ, ಬಾಟ್ಲಿಂಗ್, ಮಾರಾಟ ಮಳಿಗೆಗಳು ಸೇರಿ ಎಲ್ಲ ಸ್ವರೂಪದ ಶುಲ್ಕಗಳನ್ನು ಶೇಕಡಾ ನೂರರಷ್ಟು ಹೆಚ್ಚಳಕ್ಕೆ ಮುಂದಾಗಿದೆ. ಇದಕ್ಕಾಗಿ ಅಬಕಾರಿ ಕಾನೂನುಗಳಿಗೆ ತಿದ್ದುಪಡಿ ಮಾಡಿ ಕರಡು ನಿಯಮಗಳ ಅಧಿಸೂಚನೆಯನ್ನು ಪ್ರಕಟಿಸಿದೆ. ಜುಲೈ 1 ರಿಂದ ಪರಿಷ್ಕೃತ ದರಗಳು ಜಾರಿಗೊಳ್ಳಲಿವೆ. ಆ ಮೂಲಕ ಉದ್ಯಮದ ಅಂತ್ಯಕ್ಕೆ ಮೊಳೆ ಹೊಡೆದಂತಾಗಲಿದೆ ಎಂದಿದ್ದಾರೆ.

ಇಲಾಖೆಗೆ 40 ಸಾವಿರ ಕೋಟಿಯ ಗುರಿ ನಿಗದಿ ಮಾಡಲಾಗಿದೆ. ಇದನ್ನು ತಲುಪಲು ಅಧಿಕಾರಿಗಳು ಇದ್ದಬದ್ದ ಎಲ್ಲಾ ಅವಕಾಶಗಳನ್ನು ಬಳಕೆ ಮಾಡುತ್ತಿದ್ದಾರೆ. ಆ ಮೂಲಕ ಉದ್ಯಮವನ್ನು ಸಂಕಷ್ಟಕ್ಕೆ ದೂಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಈಗಲೂ ಕಾಲ ಮಿಂಚಿಲ್ಲ ಉದ್ಯಮದ ಹಿತದೃಷ್ಟಿಯಿಂದ ಈಗಲೂ ಕಾಲ ಮಿಂಚಿಲ್ಲ. ಸರ್ಕಾರ ಅವೈಜ್ಞಾನಿಕ ಕ್ರಮಗಳನ್ನು ಬಿಟ್ಟು ಉದ್ಯಮ, ಮಾರಾಟಗಾರರು ಮತ್ತು ಗ್ರಾಹಕರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಸನ್ನದು ಶುಲ್ಕ ಪರಿಷ್ಕರಣೆಯನ್ನು ಮರು ಪರಿಶೀಲಿಸಬೇಕು ಎಂದು ಅಶೋಕ್ ಅವರು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನನಗೆ ಎಲ್ಲಾ ದಿನಗಳು ಒಂದೆ, ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇವೆ : ಮುಖ್ಯಮಂತ್ರಿ

ಬೆಂಗಳೂರು : ಯುಗಾದಿ, ಶಿವರಾತ್ರಿಯ ಹಬ್ಬದ ದಿನವೂ ನಾನು ಮಾಂಸ ತಿನ್ನುತ್ತೇನೆ. ಅದರಲ್ಲಿ ತಪ್ಪೇನು? ಎಲ್ಲಾ ದಿನಗಳು ಒಂದೇ ಎಂದು…

7 mins ago

ಮಡಿಕೇರಿಯಲ್ಲಿ ಹುಲಿ ಪ್ರತ್ಯಕ್ಷ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮಡಿಕೇರಿ : ನಗರದಿಂದ ಕೇವಲ 2 ಕಿ.ಮೀ. ದೂರದ ಇಬ್ನಿವಳವಾಡಿ ಗ್ರಾಮದ ಪೊನ್ನಚೆಟ್ಟಿರ ಸಂದೀಪ್ ಅವರ ತೋಟದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.…

12 mins ago

ಧರ್ಮ ಸಂಕಟ ; ರಾಜ್ಯದಲ್ಲಿರುವ 12 ಸಾವಿರ ದಲಿತ ಕ್ರಿಶ್ಚಿಯನ್ನರಿಗೆ ಎಸ್‌ಸಿ ಮೀಸಲಾತಿ ಕೈ ತಪ್ಪುವ ಭೀತಿ

ಬೆಂಗಳೂರು : ಹಿಂದೂ, ಬೌದ್ಧ ಮತ್ತು ಸಿಖ್ ಧರ್ಮೀಯರನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ (ಎಸ್‌ಸಿ) ಸ್ಥಾನಮಾನ…

1 hour ago

ಮಡಿಕೇರಿ | ನಗರದಲ್ಲಿ ಮುಳ್ಳುಹಂದಿ ಪ್ರತ್ಯಕ್ಷ

ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…

2 hours ago

ಹನೂರು | ಪಶುವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಸಾವಿಗೀಡಾದ 500 ನಾಟಿ ಕೋಳಿಗಳು

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…

2 hours ago

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

3 hours ago