ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ 100ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ನವ ಸತ್ಯಾಗ್ರಹ ಬೈಠಕ್ 2025ನ್ನು ಆರಂಭಿಸಿದೆ.
ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಘಟಾನುಘಟಿ ನಾಯಕರು ಭಾಗಿಯಾಗಿದ್ದರು.
100 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸ್ಥಳದಲ್ಲಿಯೇ ಇಂದು ಐತಿಹಾಸಿಕ ಸಭೆ ನಡೆಯುತ್ತಿದೆ.
ಐತಿಹಾಸಿಕ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಮತ್ತು ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರರು ಭಾಗವಹಿಸಿದ್ದಾರೆ.
ಸಭೆಯಲ್ಲಿ ಮುಂಬರುವ ಸವಾಲುಗಳನ್ನು ಎದುರಿಸಲು ಸಿದ್ಧರಾಗುವಂತೆ ಸಲಹೆ ನೀಡಲಾಗಿದ್ದು, ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನವನ್ನು ಚರ್ಚೆಗೆ ತೆಗೆದುಕೊಳ್ಳುವಂತೆ ಕರೆ ನೀಡಲಾಯಿತು.
ಇನ್ನು ನಾವೆಲ್ಲರೂ ಸೇರಿ ಬಾಪು ಅವರ ಸಿದ್ಧಾಂತರ ಮತ್ತು ಆದರ್ಶಗಳನ್ನು ಜನಸಾಮಾನ್ಯರಿಗೆ ತಲುಪಿಸುತ್ತೇವೆ. ದ್ವೇಷದ ರಾಜಕೀಯವನ್ನು ಸತ್ಯ ಮತ್ತು ಅಹಿಂಸೆಯಿಂದ ಸೋಲಿಸುತ್ತೇವೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…