ಬೆಳಗಾವಿ: ಬೆಳಗಾವಿ ಜಿಲ್ಲೆಯಲಿ ಬಾಣಂತಿ ಹಾಗೂ ಶಿಶುಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ತನಿಖೆಯ ಭರವಸೆ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಬಾಣಂತಿಯರು ಹಾಗೂ ಶಿಶುಗಳ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.
ಬಳ್ಳಾರಿಯಲ್ಲಿ ಐವಿ ದ್ರಾವಣದಿಂದಾಗಿ ಬಾಣಂತಿಯರು ಸಾವನ್ನಪ್ಪಿದ್ದರು. ಬೆಳಗಾವಿಯಲ್ಲಿಯೂ ಐವಿ ದ್ರಾವಣದಿಂದ ಬಾಣಂತಿಯರ ಸಾವು ಸಂಭವಿಸಿದೆಯೇ? ಅಥವಾ ಬೇರೆ ಯಾವ ಕಾರಣಕ್ಕೆ ಸಾವು ಸಂಭವಿಸಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಶಿಶುಗಳ ಸಾವಿಗೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.