Mysore
20
overcast clouds

Social Media

ಗುರುವಾರ, 26 ಡಿಸೆಂಬರ್ 2024
Light
Dark

2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ

ಬೆಂಗಳೂರು: ಡಿಸೆಂಬರ್‌.9ರಿಂದ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ದಿನಗಳ ಕಾಲ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ ಮಾಡಿದೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಡಿಸೆಂಬರ್.‌9ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. 2 ವಾರಕ್ಕಿಂತ ಹೆಚ್ಚು ದಿನಗಳ ಕಾಲ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಅಧಿವೇಶನದಲ್ಲಿ ಯಾವ ಯಾವ ವಿಷಯಗಳನ್ನು ಚರ್ಚೆ ನಡೆಸಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ವಕ್ಫ್‌ ಆಸ್ತಿ ನೋಂದಣಿ, ಪಡಿತರ ಚೀಟಿ ಗೊಂದಲ, ಅಬಕಾರಿ ಇಲಾಖೆ ಹಗರಣದ ಬಗ್ಗೆ ಅಧಿವೇಶನದಲ್ಲಿ ಸಂಪೂರ್ಣವಾಗಿ ಪ್ರಸ್ತಾಪ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾಗಿರುವ ಅನೇಕ ಸಮಸ್ಯೆಗಳ ಬಗ್ಗೆ ಚರ್ಚೆಗೆ ಹೆಚ್ಚು ಸಮಯದ ಅವಶ್ಯಕತೆಯಿದೆ. ಅಧಿವೇಶನದಲ್ಲಿ ಹಲವಾರು ವಿಷಯಗಳನ್ನು ಸಮಗ್ರವಾಗಿ ಚರ್ಚೆಯಾಗಬೇಕು. ಈ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನವನ್ನು ಎರಡು ವಾರಗಳ ಕಾಲ ನಡೆಸುವಂತೆ ಮನವಿ ಮಾಡುತ್ತೇವೆ ಎಂದರು.

Tags: