ಬೆಂಗಳೂರು: ಡಿಸೆಂಬರ್.9ರಿಂದ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಎರಡು ವಾರಕ್ಕಿಂತ ಹೆಚ್ಚು ದಿನಗಳ ಕಾಲ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿ ಮನವಿ ಮಾಡಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಡಿಸೆಂಬರ್.9ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. 2 ವಾರಕ್ಕಿಂತ ಹೆಚ್ಚು ದಿನಗಳ ಕಾಲ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಮನವಿ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಈಗಾಗಲೇ ಅಧಿವೇಶನದಲ್ಲಿ ಯಾವ ಯಾವ ವಿಷಯಗಳನ್ನು ಚರ್ಚೆ ನಡೆಸಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ವಕ್ಫ್ ಆಸ್ತಿ ನೋಂದಣಿ, ಪಡಿತರ ಚೀಟಿ ಗೊಂದಲ, ಅಬಕಾರಿ ಇಲಾಖೆ ಹಗರಣದ ಬಗ್ಗೆ ಅಧಿವೇಶನದಲ್ಲಿ ಸಂಪೂರ್ಣವಾಗಿ ಪ್ರಸ್ತಾಪ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾಗಿರುವ ಅನೇಕ ಸಮಸ್ಯೆಗಳ ಬಗ್ಗೆ ಚರ್ಚೆಗೆ ಹೆಚ್ಚು ಸಮಯದ ಅವಶ್ಯಕತೆಯಿದೆ. ಅಧಿವೇಶನದಲ್ಲಿ ಹಲವಾರು ವಿಷಯಗಳನ್ನು ಸಮಗ್ರವಾಗಿ ಚರ್ಚೆಯಾಗಬೇಕು. ಈ ನಿಟ್ಟಿನಲ್ಲಿ ಬೆಳಗಾವಿ ಅಧಿವೇಶನವನ್ನು ಎರಡು ವಾರಗಳ ಕಾಲ ನಡೆಸುವಂತೆ ಮನವಿ ಮಾಡುತ್ತೇವೆ ಎಂದರು.
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…
ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕಿನಲ್ಲಿ ಭತ್ತ, ಮುಸುಕಿನ ಜೋಳ ಬೆಳೆಗೆ ರೈತರ ಒತ್ತು ಕುಶಾಲನಗರ: ಮುಂಗಾರು ಮಳೆಯ ಪ್ರಮಾಣದಲ್ಲಿ ಕೊರತೆ ಕಂಡುಬಂದಿರುವುದರ…