ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ.
ನಾಳೆಯಿಂದ 10 ದಿನಗಳ ಕಾಲ ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನ ರಾಜ್ಯ ಸರ್ಕಾರಕ್ಕೆ ಅಗ್ನಿ ಪರೀಕ್ಷೆಯಾದಂತಾಗಿದೆ ಎನ್ನಲಾಗುತ್ತಿದೆ.
ವಕ್ಫ್, ಮುಡಾ, ಬಳ್ಳಾರಿಯಲ್ಲಿ ಬಾಣಂತಿಯವರ ಸಾವು ಸೇರಿದಂತೆ ಹಲವಾರು ವಿವಾದಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ.
ಇನ್ನು ಕೊರೊನಾ ಹಗರಣ ಕುರಿತಿ ಕುನ್ಹಾ ವರದಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಮೇಲಿನ ಬಿಡಿಎ ಹಗರಣ ಆರೋಪ, ಲೈಂಗಿಕ ದೌರ್ಜನ್ಯ ಪ್ರಕರಣ, ಯತ್ನಾಳ್-ವಿಜಯೇಂದ್ರ ಕಚ್ಚಾಟ ಪ್ರಸ್ತಾಪಿಸಿ ಪ್ರತಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರ ಕೂಡ ಸಿದ್ಧತೆ ನಡೆಸಿದೆ.
ಈ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷ ನಡುವೆ ಜಟಾಪಟಿ ನಡೆಯುವ ಸಾಧ್ಯತೆಯಿದೆ.
ಇನ್ನು ಕೇಂದ್ರದ ಅನುದಾನ ತಾರತಮ್ಯ, ಮುನಿರತ್ನ ಪ್ರಕರಣ, ಯತ್ನಾಳ್-ವಿಜಯೇಂದ್ರ ಕಚ್ಚಾಟ ಪ್ರಸ್ತಾಪಿಸಿ ಪ್ರತಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರವು ಸರ್ವ ಸಿದ್ಧತೆ ನಡೆಸಿದೆ.
ಮತ್ತೊಂದೆಡೆ ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಕುಲಾಧಿಪತಿ ಸ್ಥಾನ ರಾಜ್ಯಪಾಲರಿಂದ ಕಿತ್ತು ಮುಖ್ಯಮಂತ್ರಿಗಳಿಗೆ ನೀಡುವ ವಿಧೇಯಕ ಮಂಡಿಸುತ್ತಿದ್ದು, ಇದು ರಾಜ್ಯಪಾಲರು ಹಾಗೂ ಸರ್ಕಾರದ ನಡುವಿನ ಬಿರುಕು ತೀವ್ರಗೊಳಿಸುವ ಸಾಧ್ಯತೆಯಿದೆ.