ಬೆಂಗಳೂರು: ಬೆಳಗಾವಿಯಲ್ಲಿ ಡಿಸೆಂಬರ್.9ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ.
ಡಿಸೆಂಬರ್.9ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನ ಡಿಸೆಂಬರ್.20ರವರೆಗೆ ನಡೆಯಲಿದೆ.
ಈ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಡತ ರವಾನಿಸಿದ್ದಾರೆ.
ಈ ಕಡತಕ್ಕೆ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರು ಸಹ ಒಪ್ಪಿಗೆ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್.9ರಿಂದ ಅಧಿವೇಶನ ಆರಂಭವಾಗಲಿದ್ದು, ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.
ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿರುವ ವಕ್ಫ್ ಹಗರಣ, ಬಿಪಿಎಲ್ ಕಾರ್ಡ್ ರದ್ದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿವೇಶನದಲ್ಲಿ ಭಾರೀ ಕೋಲಾಹಲ ನಡೆಯುವ ಸಾಧ್ಯತೆಯಿದೆ.





