ಬೆಳಗಾವಿ: ಬಳ್ಳಾರಿ ರೀತಿಯಲ್ಲೇ ಬೆಳಗಾವಿ ಜಿಲ್ಲೆಯಲ್ಲೂ ಬಾಣಂತಿಯರ ಸಾವುಗಳು ಕಳೆದ ಆರು ತಿಂಗಳಿನಿಂದ ಏರುಗತಿಯಲ್ಲಿದೆ. ದಿನೇ ದಿನೇ ಹಸುಗೂಸುಗಳ ಸಾವಿನ ಸಂಖ್ಯೆ ಜಾಸ್ತಿಯಾಗುತ್ತಿದ್ದು ಈ ಕುರಿತು ವಾಸ್ತವ ಸ್ಥಿತಿ ನೋಡಲು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ಚಳಿಗಾಲದ ಅಧಿವೇಶನಕ್ಕೆ ಪಾಳ್ಗೊಳ್ಳುವ ಮುನ್ನ ಆಸ್ಪತ್ರೆಗೆ ಭೇಟಿ ನೀಡಿದ ವಿಜಯೇಂದ್ರ ಅಲ್ಲಿನ ಬಾಣಂತಿಯರು, ಮಕ್ಕಳ ಆರೋಗ್ಯ ವಿಚಾರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 6 ಬಾಣಂತಿಯರ ಸಾವಾಗಿದೆ. ದಿನೇ ದನೇ ಶಿಶು ಮರಣ ಹೆಚ್ಚಾಗುತ್ತಿದ್ದು ಇದಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಸಮಗ್ರ ಸತ್ಯಾಂಶ ಆಧಾರದ ಮೇಲೆ ಸದನದಲ್ಲಿ ಇದರ ವಿರುದ್ಧ ಧ್ವನಿ ಎತ್ತುತ್ತೇವೆ. ಇದು ರಾಜಕಾರಣ ಮಾಡುವ ವಿಷಯವೇ ಅಲ್ಲ ಎಂದರು.
ಸರ್ಕಾರಿ ಆಸ್ಪತ್ರೆಗೆ ಹೋಗುವ ಬಡವರಿಗೆ ಅನ್ಯಾಯವಾಗುತ್ತಿದ್ದು, ಬಾಣಂತಿಯರು ಅವರ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ಇದರ ಬಗ್ಗೆ ನಿರ್ಲಕ್ಷ್ಯವಹಿಸುತ್ತಿದೆ. ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಯಾರು ತಲೆಕೆಡಿಸಿಕೊಳ್ಳುತ್ತಿಲ್ಲ. ಈ ವಿಚಾರದಲ್ಲಿ ಸರ್ಕಾರ ತುರ್ತಾಗಿ ಗಮನಹರಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯದಲ್ಲಿ ಬಾಣಂತಿಯರು, ಹಸುಗೂಸುಗಳು ತೀರಿಕೊಂಡಿದ್ದನ್ನು ಗಮನಿಸಿದರೆ ಸರ್ಕಾರ ಮೆಡಿಕಲ್ ಮಾಫಿಯಾದೊಂದಿಗೆ ಸೇರಿ ಭ್ರಷ್ಟಚಾರದಲ್ಲಿ ತೊಡಗಿರುವ ಆಗಿದೆ. ಸರ್ಕಾರಿ ಆಸ್ಪತ್ರೆಗಳು ಶವಗಾರ ಆಗುತ್ತಿವೆ. ಇದಕ್ಕೆ ನೇರ ಹೊಣೆ ಕಾಂಗ್ರೆಸ್ ಸರ್ಕಾರವೇ ಆಗಿದ್ದು ಇದರ ವಿರುದ್ಧ ನಾವು ಸದನದಲ್ಲಿ ಧ್ವನಿ ಎತ್ತುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ. ಅಶ್ವತ್ಥ ನಾರಾಯಣ, ಶಾಸಕಿ ಶಶಿಕಲಾ ಜೊಲ್ಲೆ ಸೇರಿ ಹಲವು ಬಿಜೆಪಿ ಮುಖಂಡರು ಇವರಿಗೆ ಸಾಥ್ ನೀಡಿದರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…