ಬೆಂಗಳೂರು : ಬೆಳಗಾವಿ ಜಿಲ್ಲೆಯು ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರಕ್ಕೆ ಸೇರ್ಪಡೆಗೊಂಡಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದು, ಇಗೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ನೆನ್ನೆ(ಜನವರಿ ೭) ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದ ೬ನೇ ಕನ್ನಡ ಸಮಾವೇಶದಲ್ಲಿ ಬಾಗಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತಿನ ಭರದಲ್ಲಿ ಬೆಳಗಾವಿ ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕನ್ನಡ ಭಾಷೆಗೆ ಹಲವು ವರ್ಷಗಳ ಇತಿಹಾಸವಿದೆ. ನಮ್ಮ ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿ ಜೀವಂತವಾಗಿದೆ. ಇದನ್ನು ನಮ್ಮ ಸಾಹಿತಿಗಳು ಸಾಭೀತು ಮಾಡಿದ್ದಾರೆ. ನಮ್ಮ ಭಾಷೆಗೆ ಒಟ್ಟು ೮ ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ನಮ್ಮ ಹೆಮ್ಮೆಯಾಗಿದೆ. ಇಂತಹ ನಾಡಿನಲ್ಲಿ ಹಟ್ಟಲು ನಾವು ಪುಣ್ಯ ಮಾಡಿರಬೇಕು ಎಂದು ಹೇಳುತ್ತಾ, ಅದರ ಮಧ್ಯೆ ಭಾಷಣದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಹೇಳಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿದೆ.
ಬೆಳಗಾವಿ ಕರ್ನಾಟಕಕ್ಕೆ ಸೇರಿ ಹಲವು ವರ್ಷಗಳಾಗಿವೆ. ಕಾಂಗ್ರೆಸ್ ಓಟಿನ ರಾಜಕಾರಣ ಮಾಡುತ್ತಿದೆ. ಮುಂದೆ ಕಾಶ್ಮೀರಾ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಕಾಂಗ್ರೆಸ್‌ನವರು ಹೇಳುತ್ತಾರೆ. ಹೆಬ್ಬಾಳ್ಕರ್ ಹೇಳಿಕೆ ವಿಷಾದನೀಯ, ಇವರು ಆರೂವರೆ ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಂಪುಟದಿಂದ ಹೊರಗಿಡಬೇಕು ಎಂದು ಬೆಂಗಳೂರಿನಲ್ಲಿ ಶಾಸಕ ಎಸ್.ಆರ್ ವಿಶ್ವನಾಥ್ ಆಕ್ರೋಶ ಹೊರ ಹಾಕಿದ್ದಾರೆ.
ಕರ್ನಾಟಕ ವಿವಿಧ ರಾಜ್ಯದಲ್ಲಿ ಹಂಚಿಹೋಗಿತ್ತು, ನಂತರದಲ್ಲಿ ಕರ್ನಾಟಕ ಏಕೀಕರಣವಾಗಿದ್ದು. ಇಂತಹ ಸಂದರ್ಭದಲ್ಲಿ ಹಿಂದಕ್ಕೆ ಹೋಗುವ ಅವಶ್ಯಕತೆಯಿರಲಿಲ್ಲ. ಇದೊಂದು ರಾಜಕೀಯ ಪ್ರೇರಿತ ಹೇಳಿಕೆಯಾಗಿದ್ದು, ಹೇಳಿಕೆ ನೀಡುವ ಅವಶ್ಯಕತೆಯಿರಲಿಲ್ಲ. ಇದು ರಾಜಕೀಯ ಹುನ್ನಾರವಾಗಬಾರದು. ಕನ್ನಡಿಗರು ವಿವಿಧತೆಯಲ್ಲಿ ಏಕತೆಯನ್ನು ಕಾಣಬೇಕು. ಹೆಬ್ಬಾಳ್ಕರ್ ಹೇಳಿಕೆಯನ್ನು ಕನ್ನಡಿಗರಾಗಲಿ, ಮರಾಠಿಗರಾಗಲಿ ಬೆಂಬಲಿಸಲ್ಲ ಎಂದು ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…