ರಾಜ್ಯ

ಸ್ವಾತಂತ್ರ್ಯಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು: ಹೆಬ್ಬಾಳ್ಕರ್‌ ವಿವಾದಾತ್ಮಕ ಹೇಳಿಕೆ

ಬೆಂಗಳೂರು : ಬೆಳಗಾವಿ ಜಿಲ್ಲೆಯು ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರಕ್ಕೆ ಸೇರ್ಪಡೆಗೊಂಡಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿಕೆ ನೀಡಿದ್ದು, ಇಗೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ನೆನ್ನೆ(ಜನವರಿ ೭) ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದ ೬ನೇ ಕನ್ನಡ ಸಮಾವೇಶದಲ್ಲಿ ಬಾಗಿಯಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾತಿನ ಭರದಲ್ಲಿ ಬೆಳಗಾವಿ ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕನ್ನಡ ಭಾಷೆಗೆ ಹಲವು ವರ್ಷಗಳ ಇತಿಹಾಸವಿದೆ. ನಮ್ಮ ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿ ಜೀವಂತವಾಗಿದೆ. ಇದನ್ನು ನಮ್ಮ ಸಾಹಿತಿಗಳು ಸಾಭೀತು ಮಾಡಿದ್ದಾರೆ. ನಮ್ಮ ಭಾಷೆಗೆ ಒಟ್ಟು ೮ ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ನಮ್ಮ ಹೆಮ್ಮೆಯಾಗಿದೆ. ಇಂತಹ ನಾಡಿನಲ್ಲಿ ಹಟ್ಟಲು ನಾವು ಪುಣ್ಯ ಮಾಡಿರಬೇಕು ಎಂದು ಹೇಳುತ್ತಾ, ಅದರ ಮಧ್ಯೆ ಭಾಷಣದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಹೇಳಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್‌ ವೈರಲ್‌ ಆಗಿದೆ.

ಬೆಳಗಾವಿ ಕರ್ನಾಟಕಕ್ಕೆ ಸೇರಿ ಹಲವು ವರ್ಷಗಳಾಗಿವೆ. ಕಾಂಗ್ರೆಸ್‌ ಓಟಿನ ರಾಜಕಾರಣ ಮಾಡುತ್ತಿದೆ. ಮುಂದೆ ಕಾಶ್ಮೀರಾ ಪಾಕಿಸ್ತಾನಕ್ಕೆ ಸೇರಿದ್ದು ಎಂದು ಕಾಂಗ್ರೆಸ್‌ನವರು ಹೇಳುತ್ತಾರೆ. ಹೆಬ್ಬಾಳ್ಕರ್‌ ಹೇಳಿಕೆ ವಿಷಾದನೀಯ, ಇವರು ಆರೂವರೆ ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ ಅವರು ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ಸಂಪುಟದಿಂದ ಹೊರಗಿಡಬೇಕು ಎಂದು ಬೆಂಗಳೂರಿನಲ್ಲಿ ಶಾಸಕ ಎಸ್‌.ಆರ್‌ ವಿಶ್ವನಾಥ್‌ ಆಕ್ರೋಶ ಹೊರ ಹಾಕಿದ್ದಾರೆ.

ಕರ್ನಾಟಕ ವಿವಿಧ ರಾಜ್ಯದಲ್ಲಿ ಹಂಚಿಹೋಗಿತ್ತು, ನಂತರದಲ್ಲಿ ಕರ್ನಾಟಕ ಏಕೀಕರಣವಾಗಿದ್ದು. ಇಂತಹ ಸಂದರ್ಭದಲ್ಲಿ ಹಿಂದಕ್ಕೆ ಹೋಗುವ ಅವಶ್ಯಕತೆಯಿರಲಿಲ್ಲ. ಇದೊಂದು ರಾಜಕೀಯ ಪ್ರೇರಿತ ಹೇಳಿಕೆಯಾಗಿದ್ದು, ಹೇಳಿಕೆ ನೀಡುವ ಅವಶ್ಯಕತೆಯಿರಲಿಲ್ಲ. ಇದು ರಾಜಕೀಯ ಹುನ್ನಾರವಾಗಬಾರದು. ಕನ್ನಡಿಗರು ವಿವಿಧತೆಯಲ್ಲಿ ಏಕತೆಯನ್ನು ಕಾಣಬೇಕು. ಹೆಬ್ಬಾಳ್ಕರ್‌ ಹೇಳಿಕೆಯನ್ನು ಕನ್ನಡಿಗರಾಗಲಿ, ಮರಾಠಿಗರಾಗಲಿ ಬೆಂಬಲಿಸಲ್ಲ ಎಂದು ಡಾ. ಅಶ್ವಥ್‌ ನಾರಾಯಣ್‌ ಹೇಳಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago