ಬೆಳಗಾವಿ : ಬೆಳಗಾವಿ ಕಂಟೊನ್ಮೆಂಟ್ ಬೋರ್ಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಮ್ಮ ನಿವಾಸದಲ್ಲಿ ಶನಿವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಮಿಳುನಾಡು ಮೂಲದ ಕೆ.ಆನಂದ್ (40 ವರ್ಷ) ಮೃತರಾಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಬೆಳಗಾವಿಯಲ್ಲಿ ಸಿಇಒ ಆಗಿ ನಿಯೋಜನೆಗೊಂಡಿದ್ದರು.
ಕೆ.ಆನಂದ್ ಬೆಳಗಾವಿಯ ಮನೆಯಲ್ಲಿ ಒಬ್ಬರೆ ವಾಸಿಸುತ್ತಿದ್ದರು. ಶನಿವಾರ ಬೆಳಿಗ್ಗೆಯಿಂದಲೂ ಮನೆ ಬಾಗಿಲು ತೆರೆಯದ ಕಾರಣ ಕ್ಯಾಂಪ್ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಮಾಹಿತಿ ಪಡೆದ ಪೊಲೀಸರು ಮನೆಯ ಬಾಗಿಲನ್ನು ಒಡೆದಾಗ ಆನಂದ್ ಶವವಾಗಿ ಪತ್ತೆಯಾಗಿದ್ದಾರೆ.
ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಂಡು ಬಾರದ ಹಿನ್ನೆಲೆಯಲ್ಲಿ ಇದು ಆತ್ಮಹತ್ಯೆ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಕಳೆದೆರೆಡು ದಿನಗಳಿಂದ ಆನಂದ್ ಕಚೇರಿಗೆ ಹೋಗುತ್ತಿರಲಿಲ್ಲ. ಇಂದು ಬೆಳಿಗ್ಗೆ ಬಾಗಿಲು ತೆಗೆಯದ ಕಾರಣ ಕದ ಒಡೆಯಲಾಯಿತು. ಬಾಗಿಲು ಒಡೆದು ನೋಡಿದಾಗ ಶವವಾಗಿ ಪತ್ತೆಯಾಗಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಡು ಮಂಡಳಿಯ ನೇಮಕಾತಿಯಲ್ಲಿನ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಂಡು ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ಬೆನ್ನಲ್ಲೇ ಸಿಇಒ ಆನಂದ್ ಆತ್ಮಹತ್ಯೆ ಪ್ರಕರಣ ಚರ್ಚೆಗೆ ಗ್ರಾಸವಾಗಿದೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…