ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ವೇಳೆ ಬುಧವಾರ ಕಲ್ಲು ತೊರಾಟದಲ್ಲಿ ಪೊಲೀಸ್ ಇಸ್ಟ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿದೆ. ಜೊತೆಗೆ ಸರ್ಕಾರಿ ಬಸ್, ಪೊಲೀಸ್ ವಾಹನಗಳು ಸಹ ಜಖಂಗೊಂಡ ಹಿನ್ನೆಲೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲ್ಲು ಎಸೆದ ನಿಂಗಪ್ಪ ಬಣದ್, ಉಮೇಶ್ ಇಂಗಳೆವಾರ್, ರಾಮಗೌಡ ಫಕೀರಗೌಡ, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್‌ಐಆರ್ ದಾಖಲಾಗಿದೆ. ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಜೊತೆಗೆ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್‌ಎಸ್ ಕಲಂ 115(2), 109(1), 118(2), 352, 351(2) 132,121,223,324,184,189(3), 192(2), 190 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…