ಬೆಳಗಾವಿ : ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ ಸ್ಪೀಕರ್ ಯು.ಟಿ ಖಾದರ್, ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿದರು.
ತುಮಕೂರು ಜಿಲ್ಲೆಯ ಸಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ ಜಯಚಂದ್ರ ಅವರು ಸದನಕ್ಕೆ ಹಿರಿಯರು. ಸದನಕ್ಕೆ ಸರಿಯಾದ ಸಮಯಕ್ಕೆ ಆಗಮಿಸುವುದು, ಕಾರ್ಯ ಕಲಾಮ ಮುಕ್ತಾಯವಾಗುವವರೆಗೆ ಸದನಸಲ್ಲಿ ಹಾಜರಿರುತ್ತಾರೆ. ಯಾವುದೇ ಅನಗತ್ಯ ಚರ್ಚೆಗೆ ಮುಂದಾಗದೆ ಸದನಕ್ಕೆ ಅಗತ್ಯ ಸಲಹೆ ನೀಡುತ್ತಾರೆ ಎಂದು ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದರು.