ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು.
ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ ಮೂಲಕ ಕಲಾಪ ಆರಂಭಿಸಲಾಯಿತು. ಸ್ಪೀಕರ್ ಯು.ಟಿ.ಖಾದರ್ ಸದಸ್ಯರಿಗೆ ಸಂವಿಧಾನ ಪೀಠಿಕೆ ಬೋಧನೆ ಮಾಡಿದರು.
ಇತ್ತೀಚೆಗೆ ನಿಧನರಾದ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ, ಸಾಹಿತಿ ಎಸ್.ಎಲ್.ಭೈರಪ್ಪ, ಮಾಜಿ ಶಾಸಕ ಆರ್.ವಿ.ದೇವರಾಜ್, ಹಾಸ್ಯನಟ ಉಮೇಶ್ ಅವರಿಗೆ ಸಂತಾಪ ಸೂಚಿಸಿದರು.
ವಿಧಾನಪರಿಷತ್‌ನಲ್ಲೂ ಕಲಾಪ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ಹಲವು ವಿಚಾರಗಳನ್ನು ಇಟ್ಟುಕೊಂಡು ಆಡಳಿತ ಪಕ್ಷದ ವಿರುದ್ಧ ಮುಗಿಬೀಳಲು ವಿಪಕ್ಷ ನಾಯಕರು ಸಜ್ಜಾಗಿದ್ದಾರೆ.



