ಬೆಳಗಾವಿ: ಇತ್ತೀಚೆಗೆ ರಾಜ್ಯದಲ್ಲಿ ಭ್ರೂಣ ಹತ್ಯೆಗಳು ಹೆಚ್ಚಾಗುತ್ತಿದ್ದು, ಮಂಡ್ಯದ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೆ ಬೆಳಗಾವಿ ಪಟ್ಟಣದ ತೋಟವೊಂದರಲ್ಲಿ ಭ್ರೂಣ ಹತ್ಯೆ ಪತ್ತೆಯಾಗಿದೆ.
ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡಖಾನ್ ಬೆಳಗಾವಿಯ ತಿಗಡೊಳ್ಳಿ ಗ್ರಾಮದಲ್ಲಿ ತೋಟವೊಂದನ್ನು ಲೀಸ್‌ಗೆ ಪಡೆದು ಭ್ರೂಣ ಹತ್ಯೆ ಮಾಡುತ್ತಿದ್ದ ಪ್ರಕರಣ ಬೆಳಕಿದೆ ಬಂದಿದೆ.
ನಕಲಿ ವೈದ್ಯನ ಈ ಕೃತ್ಯದ ಬಗ್ಗೆ ಬೆಳಗಾವಿಯ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಮಾಹಿತಿ ಬಂದಿದ್ದು, ಜಿಲ್ಲಾಧಿಕಾರಿ ಅವರು ಪೊಲೀಸರು, ಆರೋಗ್ಯ ಇಲಾಖೆ ತಂಡ ಹಾಗೂ ಎಫ್‌ಎಸ್‌ಎಲ್ ತಂಡದವರಿಗೆ ಕಾರ್ಯಚರಣೆಗೆ ಸೂಚಿಸಿದ್ದರು. ಅದರಂತೆ ಭಾನುವಾರ ಕೈಗೊಂಡಿದ್ದ ಕಾರ್ಯಚರಣೆ ವೇಳೆ ಭ್ರೂಣ ಹತ್ಯೆ ಪತ್ತೆಯಾಗಿದ್ದು, ಇವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಪಟ್ಟಣದ ತನ್ನ ಕ್ಲಿನಿಕ್‌ನಲ್ಲಿ ಈ ನಕಲಿ ವೈದ್ಯ ಗರ್ಭಪಾತ ಮಾಡುತ್ತಿದ್ದ ಹಾಗೂ ಭ್ರೂಣಗಳನ್ನು ತಾನು ಲೀಸ್ ಪಡೆದ ಫಾರ್ಮ್‌ಹೌಸ್‌ನಲ್ಲಿ ಹೂಳುತ್ತಿದ್ದ. ಈ ಕುರಿತು ಮಾಹಿತಿ ಪಡೆದ ಪೊಲೀಸರು, ಆತನ ಸಹಾಯಕ ರೋಹಿತ್ ಕುಪ್ಪಸಗೌಡರ್‌ನನ್ನು ವಿಚಾರಣೆಗೆ ಒಳಪಡಿದ್ದರು. ಅವನು ನೀಡಿದ ಮಾಹಿತಿ ಆಧರಿಸಿ ಕಾರ್ಯಚರಣೆ ನಡೆಸಿದ್ದರು. ಪಟ್ಟಣದ ಕ್ಲಿನಿಕ್‌ನಲ್ಲಿ ಈ ಮೂರು ಭ್ರೂಣಗಳ ಹತ್ಯೆಯಾಗಿದ್ದವು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…