Mysore
18
few clouds

Social Media

ಸೋಮವಾರ, 05 ಜನವರಿ 2026
Light
Dark

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆಯಲ್ಲೊ ಓರ್ವ ಮೃತಪಟ್ಟಿದ್ದಾನೆ ಎಂದು ದೃಶ್ಯ ಮಾಧ್ಯಮಗಳು ವರದಿ ಮಾಡಿವೆ.

ಜನಾರ್ದನ ರೆಡ್ಡಿ ಮತ್ತು ಕಾಂಗ್ರೆಸ್ ನಾಯಕ ನಾರಾ ಭರತ್ ರೆಡ್ಡಿ ಬೆಂಬಲಿಗರ ಮಧ್ಯೆ ಗಲಾಟೆ ಆರಂಭಗೊಂಡು ಕಲ್ಲು ತೂರಾಟ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಎರಡೂ ಗುಂಪಿಗಳ ನಡುವೆ ಬಡಿದಾಟ ನಡೆದಿದೆ ಎಂದು ಮೂಲಗಳು ತಿಳಿಸಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಸ್ಥಿತಿ ನಿಯಂತ್ರಿಸಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಭರತ್ ರೆಡ್ಡಿ ಬೆಂಬಲಿಗರು ತನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಜನಾರ್ದನ ರೆಡ್ಡಿಗಂಭೀರ ಆರೋಪ ಮಾಡಿದ್ದಾರೆ.

ಗಲಾಟೆಗೆ ಕಾರಣವಾದರೂ ಏನು?
ಜನವರಿ 3ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನಲೆಯಲ್ಲಿ ಭರತ್ ರೆಡ್ಡಿ ಬೆಂಬಲಿಗರು ನಗರದೆಲ್ಲಡೆ ಬ್ಯಾನರ್ ಅಳವಡಿಸಿದ್ದಾರೆ. ಅದರಂತೆ ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಅಳವಡಿಕೆಗೆ ಮುಂದಾಗಿದ್ದಾರೆ. ಇದಕ್ಕೆ ಅವರ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಗಲಾಟೆಗೆ ಕಾರಣವಾಗಿದ್ದು, ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ ಎಂದು ವರದಿಯೊಂದು ತಿಳಿಸಿದೆ. ಇದೇ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಜನಾರ್ದನ ರೆಡ್ಡಿ ನಿವಾಸಕ್ಕೆ ಬಿಜೆಪಿ ನಾಯಕ ಶ್ರೀರಾಮುಲು ಆಗಮಿಸಿದ್ದಾರೆ. ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿ ಮತ್ತು ಜನಾರ್ದನ ರೆಡ್ಡಿ ಬೆಂಬಲಿಗರ ಮಧ್ಯೆ ಜಗಳ ವಾಗ್ವಾದ ನಡೆದಿದ್ದು ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸಿದೆ. ಈಗಾಗಲೇ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಸದ್ಯ ಜಿಲ್ಲಾಡಳಿತ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಘಟನೆಯಲ್ಲಿ ಹಲವು ಮನೆಗಳ ಮೇಲೆ ಕಲ್ಲು ತೂರಾಟವೂ ನಡೆದಿದೆ ಎನ್ನಲಾಗಿದೆ.

Tags:
error: Content is protected !!