ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆದಂಡವಾಗಿದೆ.
ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಪೊಲೀಸ್ ಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಳ್ಳಾರಿ ವಲಯಕ್ಕೆ ನೂತನ ಐಜಿ ಆಗಿ ಹರ್ಷಾ ಗುಪ್ತಾ ಹಾಗೂ ನೂತನ ಎಸ್ಪಿ ಆಗಿ ಡಾ.ಸುಮನ್ ರೆಡ್ಡಿ ಪೆನ್ನೇಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.





