ರಾಜ್ಯ

ಬಳ್ಳಾರಿ ಘರ್ಷಣೆ | ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಿದ ಜಮೀರ್‌ ; ಮನೆ ಕಟ್ಟಿಸಿ ಕೊಡುವ ಭರವಸೆ

ಬಳ್ಳಾರಿ : ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ಕಟ್ಟುವ ವಿಚಾರವಾಗಿ ಗುಂಪುಗಳ ನಡುವೆ ನಡೆದ ಮಾರಮಾರಿಯಲ್ಲಿ ವೇಳೆ ಗುಂಡು ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.

ಬಳ್ಳಾರಿಯ ಹುಸೇನ್ ನಗರದಲ್ಲಿರುವ ರಾಜಶೇಖರ್ ನಿವಾಸಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಮೀರ್ ಅಹ್ಮದ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಇದೇ ವೇಳೆ ಮೃತರ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಿದರು.

ಕುಟುಂಬದ ಜೊತೆ ಕಾಂಗ್ರೆಸ್ ಪಕ್ಷ ಸರ್ಕಾರ ಸದಾ ಇರಲಿದೆ ಎಂದು ಭರವಸೆ ನೀಡಿದ ಸಚಿವರು, ರಾಜಶೇಖರ್ ಕುಟುಂಬಕ್ಕೆ ಮನೆ ಕಟ್ಟಿ ಕೊಡಲಾಗುವುದು ಪಕ್ಷದ ವತಿಯಿಂದಲೂ ನೆರವು ನೀಡಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಳಿರಂಗನಬೆಟ್ಟದಲ್ಲಿ ಅಗ್ನಿ ಅವಘಡ : ಹೊತ್ತಿ ಉರಿದ ಹೋಟೆಲ್‌, ಅಂಗಡಿ ಮಳಿಗೆಗಳು

ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ…

17 mins ago

ಓದುಗರ ಪತ್ರ: ರಾಜಕಾರಣಿಗಳು ಜವಾಬ್ದಾರಿಯಿಂದ ವರ್ತಿಸಲಿ

ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ನಡೆಯುವುದು ೨೦೨೮ ಏಪ್ರಿಲ್/ಮೇ ತಿಂಗಳಲ್ಲಿ, ಅಂದರೆ ಸುಮಾರು, ಇನ್ನು ಎರಡೂವರೆ ವರ್ಷಗಳ ಬಳಿಕ. ಆದರೆ…

5 hours ago

ಓದುಗರ ಪತ್ರ: ಪ್ರಶ್ನೆ ಪತ್ರಿಕೆ ಸೋರಿಕೆ ಎಂಬ ನಿರಂತರ ಶಾಪ

ರಾಜ್ಯದಲ್ಲಿ ಪರೀಕ್ಷೆಗಳೆಂದರೆ ಸೋರಿಕೆಗಳ ಸರಣಿ ಎಂಬಂತಾಗಿರುವುದು ದುರದೃಷ್ಟಕರ. ಈ ಬಾರಿ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ೮೦ ಅಂಕಗಳ…

5 hours ago

ಓದುಗರ ಪತ್ರ: ಶಾಲೆಗಳಲ್ಲಿ ಕನ್ನಡ ದಿನ ದಿನಪತ್ರಿಕೆಗಳ ಓದು ಕಡ್ಡಾಯವಾಗಲಿ

ಉತ್ತರ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸುವ ಮೂಲಕ ಶಾಲೆಗಳ ನೋಟವನ್ನು ಬದಲಾಯಿಸುವುದರ ಜೊತೆಗೆ, ವಿದ್ಯಾರ್ಥಿಗಳ ಆಲೋಚನಾ ಶೈಲಿಯನ್ನು…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು – ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

5 hours ago

ಸ್ಮಾರಕವಾಗದೇ ಪಾಳು ಬಿದ್ದಿದೆ ಕೆ.ಎಸ್.ನರಸಿಂಹಸ್ವಾಮಿ ಮನೆ

ಮಹೇಶ್ ಕರೋಟಿ ಇದ್ದೂ ಇಲ್ಲದಂತಾಗಿರುವ ಟ್ರಸ್ಟ್ , ಸರ್ಕಾರ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಿಕ್ಕೇರಿ: ಕಿಕ್ಕೇರಿ ಸುಬ್ಬರಾವ್ ನರಸಿಂಹಸ್ವಾಮಿ (ಕೆ.ಎಸ್.ನರಸಿಂಹಸ್ವಾಮಿ) ಅವರು…

5 hours ago