ಬಳ್ಳಾರಿ: ಬಳ್ಳಾರಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಇಬ್ಬರು ಗನ್‌ಮ್ಯಾನ್‌ಗಳನ್ನು ಬಂಧಿಸಿದ್ದಾರೆ.
ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿದ್ದರು. ಈ ಪ್ರಕರಣವನ್ನು ಸರ್ಕಾರಿ ಸಿಐಡಿ ತನಿಖೆಗೆ ವಹಿಸಿತ್ತು. ಖಾಸಗಿ ಗನ್‌ಮ್ಯಾನ್‌ಗಳಾದ ಬಲ್ಜಿತ್ ಸಿಂಗ್ ಹಾಗೂ ಬಲ್ಜಿನಂರ್ ಸಿಂಗ್ ಎಂಬುವವರನ್ನು ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.
ಘಟನೆ ವಿವರ: ಬಳ್ಳಾರಿ ನಗರದ ಸಿರುಗುಪ್ಪ ರಸ್ತೆಯ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಯ ಮುಂದೆ ಜನವರಿ.01ರಂದು ಬ್ಯಾನರ್ ಹರಿದ ವಿಚಾರವಾಗಿ ಭಾರೀ ಗಲಾಟೆ ನಡೆದಿತ್ತು. ಈ ವೇಳೆ ಫೈರಿಂಗ್ ಮಾಡಿದ ಪರಿಣಾಮ ಓರ್ವ ಕಾರ್ಯಕರ್ತೆ ರಾಜಶೇಖರ್ ರೆಡ್ಡಿ ಬಲಿಯಾಗಿದ್ದರು.





