ಬಳ್ಳಾರಿ: ಬಳ್ಳಾರಿ ಬಿಮ್ಸ್ನಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಜಮೀರ್ ಅಹಮ್ಮದ್ ಖಾನ್ ಘೋಷಣೆ ಮಾಡಿದ್ದಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದರು. ಘಟನೆ ಬೆನ್ನಲ್ಲೇ ಸಿಎಂ ಪರಿಹಾರ ನಿಧಿಯಿಂದ ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿತ್ತು. ಈಗ ಈ ಪರಿಹಾರ ಮೊತ್ತವನ್ನು ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಹೆಚ್ಚಳ ಮಾಡಿದ್ದಾರೆ.
ಸಂಡೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ಬಾಣಂತಿಯರ ಸರಣಿ ಸಾವು ದುಃಖಕರ. ಮೃತರ ಕುಟುಂಬಕ್ಕೆ ಈಗಾಗಲೇ ಸರ್ಕಾರದ ವತಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಇದರ ಜೊತೆಗೆ ತಲಾ 3 ಲಕ್ಷ ರೂಪಾಯಿ ಹೆಚ್ಚಿಸಿ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…