Mysore
18
broken clouds

Social Media

ಮಂಗಳವಾರ, 14 ಜನವರಿ 2025
Light
Dark

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಸಿಎಂ ಸಿದ್ದು ಆದೇಶ

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಸಚಿವ ಸಂಪುಟದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳು ಹಾಗೂ ಸಚಿವರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಖಡಕ್‌ ಸೂಚನೆ ನೀಡಿದ್ದಾರೆ.

ಬಳ್ಳಾರಿಯಲ್ಲಿ ಗರ್ಭಿಣಿ ತಾಯಂದಿರ ಸಾವಿನ ಸಂಖ್ಯೆ 5ಕ್ಕೆ ಏರಿದೆ. ಈ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದಾರೋ ಅವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಿ. ನನ್ನ ಸರ್ಕಾರದಲ್ಲಿ ಇದಕ್ಕೆಲ್ಲಾ ಅವಕಾಶವಿಲ್ಲ ಎಂದು ಕಿಡಿಕಾರಿದರು.

ಬಳ್ಳಾರಿ ಆಸ್ಪತ್ರೆಯಲ್ಲಿ ಹೆರಿಗೆಯ ನಂತರ ತಾಯಂದಿರಿಗೆ ಐವಿ ದ್ರಾವಣ ನೀಡಲಾಗಿದೆ. ಇದರಿಂದ ಕೆಲ ದಿನಗಳ ನಂತರ ನಾಲ್ವರು ಬಾಣಂತಿಯರು ಸಾವಿಗೀಡಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಈ ವರ್ಷದ ಆರಂಭದಿಂದ ಇಲ್ಲಿಯವರೆಗೆ 327 ಹೆರಿಗೆಯ ನಂತರ ತಾಯಿಯರ ಸಾವಾಗಿದೆ ಎಂದು ವರದಿಯಾಗಿದೆ. ಈ ಕುರಿತು ಪರಿಶೀಲನೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನು ಬಾಣಂತಿಯರಿಗೆ ನೀಡಿದ್ದ ಐವಿ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಬಳಸಲು ಯೋಗ್ಯವಲ್ಲ ಎಂದು ಕರ್ನಾಟಕ ರಾಜ್ಯ ಡ್ರಗ್ಸ್‌ ಲಾಜಿಸ್ಟಿಕ್ಸ್‌ ಮತ್ತು ವೇರ್‌ಹೌಸಿಂಗ್‌ ತನ್ನ ವರದಿಯಲ್ಲಿ ತಿಳಿಸಿದೆ. ಆದರೂ ವೈದ್ಯರು ಅದೇ ದ್ರಾವಣವನ್ನು ಮತ್ತೆ ಮತ್ತೆ ಬಳಸಿರುವುದು ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

 

Tags: