ರಾಜ್ಯ

ಬಾಣಂತಿಯರ ಸರಣಿ ಸಾವು ಪ್ರಕರಣ: ಲೋಕಾಯುಕ್ತದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್‌ ಆದೇಶ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ ಐವರು ಬಾಣಂತಿಯರ ಸಾವಿನ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಘಟನೆ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಔಷಧ ನಿಯಂತ್ರಕರು ಹಾಗೂ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ.

ಈ ಬಗ್ಗೆ ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳಿಗೆ ತನಿಖೆ ನಡೆಸುವ ಹೊಣೆ ನೀಡಲಾಗಿದೆ. ಸರ್ಚ್‌ ವಾರೆಂಟ್‌ ಪಡೆದು ಘಟನೆ ನಡೆದ ಆಸ್ಪತ್ರೆ, ಔಷಧ ಉಗ್ರಾಣ ತಪಾಸಣೆ ನಡೆಸಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಈ ಮೂಲಕ ಇತರ ಜಿಲ್ಲೆಗಳಲ್ಲಿ ಇಂತಹ ದುರ್ಘಟನೆ ನಡೆಯುವ ಸಾಧ್ಯತೆ ಇದೆಯೇ ಎಂಬುದರ ಕುರಿತು ಮುನ್ನೆಚ್ಚರಿಕೆಯಾಗಿ ತಪಾಸಣೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ: ಸ್ನೇಕ್ ಮಧು ಕಾರ್ಯಕ್ಕೆ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…

39 mins ago

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

2 hours ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

2 hours ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

5 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

9 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

9 hours ago