ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿದ ಅವರು, ಮೊನ್ನೆ ನಡೆದ ಗಲಭೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಸಾವಾಗಿದೆ. ಮೃತ ರಾಜಶೇಖರ್ ಮನೆಗೆ ಭೇಟಿ ನೀಡಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದೇನೆ. ಕುಟುಂಬದ ಜೊತೆಗೆ ಪಕ್ಷ ಇದೆ ಎಂದು ತಿಳಿಸಲು ಬಂದಿದ್ದೇನೆ. ಮೃತ ವ್ಯಕ್ತಿಯ ಕುಟುಂಬ ಸರ್ಕಾರಿ ಉದ್ಯೋಗಕ್ಕಾಗಿ ಬೇಡಿಕೆ ಇಟ್ಟಿದೆ. ಈ ಬಗ್ಗೆ ವಿಚಾರ ಮಾಡಲಾಗುತ್ತದೆ ಎಂದು ಹೇಳಿದರು.
ಈ ವೇಳೆ ಸಚಿವ ಜಮೀರ್ ಅಹಮ್ಮದ್ ಖಾನ್ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು..





