ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.
ಬಳ್ಳಾರಿಯಿಂದ ಬೆಂಗಳೂರಿನವರಿಗೆ ಪಾದಯಾತ್ರೆ ನಡೆಸಿ ಕಾಂಗ್ರೆಸ್ಸಿಗೆ ಸ್ಪಷ್ಟ ಸಂದೇಶ ರವಾನೆ ಮಾಡಬೇಕು ಎಂಬುದು ಮಾಜಿ ಸಚಿವ ಬಿ ಶ್ರೀರಾಮುಲು ಅವರ ಆಲೋಚನೆಯಾಗಿದೆ. ಆದರೆ, ಪಾದಯಾತ್ರೆ ಬದಲಿಗೆ ಬಳ್ಳಾರಿಯಲ್ಲೇ ಬೃಹತ್ ಪ್ರತಿಭಟನೆ ನಡೆಸಿ ಕಾಂಗ್ರೆಸ್ ನ ಗುಂಡಾವರ್ತನೆ ಹಾಗೂ ದಬ್ಬಾಳಿಕೆಯ ವಿರುದ್ಧ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಸಮಾವೇಶ ನಡೆಸಬೇಕು ಎಂಬುದು ಶಾಸಕ ಜನಾರ್ದನ ರೆಡ್ಡಿ ಅವರ ವಾದವಾಗಿದೆ. ಹೀಗೆ ಇಬ್ಬರು ನಾಯಕ ನಡುವೆ ಪರಸ್ಪರ ಭಿನ್ನಾಭಿಪ್ರಾಯ ಉಂಟಾಗಿರುವುದರಿಂದ ಪಾದಯಾತ್ರೆ ನಡೆಸುವ ಬಗ್ಗೆ ಅಂತಿಮವಾಗಿ ಕೇಂದ್ರ ವರಿಷ್ಠರೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಈ ಕುರಿತು ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ಕೇಂದ್ರ ವರಿಷ್ಠರಿಗೆ ವರದಿಯನ್ನು ಸಲ್ಲಿಸಿದ್ದಾರೆ. ಸದ್ಯ ದೆಹಲಿ ನಾಯಕರು ನೂತನ ರಾಷ್ಟ್ರೀಯ ಅಧ್ಯಕ್ಷರಾಗಲಿರುವ ನಿತಿನ್ ನಬೀನ್ ಅವರ ಅಧಿಕಾರ ಸ್ವೀಕಾರ ಸಮಾರಂಭದ ಬಗ್ಗೆ ಹೆಚ್ಚು ಗಮನ ಹರಿಸಿರುವ ಕಾರಣ ಕರ್ನಾಟಕದ ಬೆಳವಣಿಗೆಗಳ ಬಗ್ಗೆ ಗಮನಹರಿಸಿಲ್ಲ. ಏನೇ ನಿರ್ಧಾರ ಹೊರಬೀಳಬೇಕಾದರೆ ಇದೇ ತಿಂಗಳ 22 ನಂತರವೇ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಗೊತ್ತಾಗಿದೆ.
ಬಳ್ಳಾರಿಯ ರೆಡ್ಡಿ ಸಹೋದರರ ವಿರುದ್ಧ ಹಾಲಿ ಸಿಎಂ ಸಿದ್ದರಾಮಯ್ಯ ಅವರು 2012 ರಲ್ಲಿ ಪಾದಯಾತ್ರೆ ನಡೆಸಿದ್ದರು. ಇದೊಂದು ಐತಿಹಾಸಿಕ ಪಾದಯಾತ್ರೆಯಾಗಿತ್ತು. ರಾಜ್ಯದಲ್ಲಿ ಹಲವು ರಾಜಕೀಯ ಪಲ್ಲಟಗಳಿಗೂ ಇದು ಕಾರಣವಾಗಿತ್ತು. ಇದೀಗ ಸಿದ್ದರಾಮಯ್ಯ ವಿರುದ್ಧ ಹಳೇ ಲೆಕ್ಕಾ ಚುಕ್ತಾ ಮಾಡಲು ರೆಡ್ಡಿ ಬ್ರದರ್ಸ್ ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ. ಬಳ್ಳಾರಿಯಲ್ಲಿ ನಡೆದ ಗಲಾಟೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಪಾದಯಾತ್ರೆಗೆ ಚಿಂತನೆ ನಡೆಯುತ್ತಿದೆ. ಆದರೆ ಈ ಪಾದಯಾತ್ರೆಗೆ ಇನ್ನು ಬಿಜೆಪಿ ರಾಜ್ಯ ನಾಯಕತ್ವ ಅನುಮತಿ ನೀಡಿಲ್ಲ.
ಪಾದಯಾತ್ರೆಯ ಕುರಿತಾಗಿ ಮಾತನಾಡಿದ ಮಾಜಿ ಶಾಸಕ ಶ್ರೀರಾಮುಲು,” ಪಾದಯಾತ್ರೆಯ ಬಗ್ಗೆ ನಮ್ಮ ರಾಜ್ಯಾಧ್ಯಕ್ಷ ವಿಜಯೇಂದ್ರ ಜತೆ ಚರ್ಚೆ ಮಾಡಿದ್ದೇನೆ. ಜನವರಿ 17 ರಂದು ಬಳ್ಳಾರಿಯಲ್ಲಿ ಸಮಾವೇಶ ಮಾಡ್ತೇವೆ. ಪಾದಯಾತ್ರೆ ಮಾಡಲು ನಮ್ಮ ಪಕ್ಷ ಈವರೆಗೆ ಅನುಮತಿ ಕೊಟ್ಟಿಲ್ಲ. ಎಲ್ಲ ವಿಷಯಗಳನ್ನು ತಿಳಿದುಕೊಂಡು ತಿಳಿಸುತ್ತೇವೆ. ನಮ್ಮಲ್ಲಿ ಪಾದಯಾತ್ರೆ ಬಗ್ಗೆ ಯಾವುದೇ ಗೊಂದಲ ಇಲ್ಲ. ನಮ್ಮ ಭಾಗದ ಮುಖಂಡರೂ ಪಾದಯಾತ್ರೆ ಮಾಡಬೇಕು ಅಂದಿದ್ದಾರೆ. ಜನಾರ್ದನ ರೆಡ್ಡಿ ಅವರು ಪಕ್ಷದ ಜತೆ ಚರ್ಚೆ ಮಾಡಬೇಕು ಅಂದಿದ್ದಾರೆ. ಪಕ್ಷ ಏನು ಹೇಳುತ್ತೋ ನಾವು ಅದರಂತೆ ನಡೆದುಕೊಳ್ಳುತ್ತೇವೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಪಾದಯಾತ್ರೆ ಇತಿಹಾಸ
2012 ಅಂದು ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರಿಗೂ ಬಳ್ಳಾರಿಯ ಜನಾರ್ದನ ರೆಡ್ಡಿ ಸಹೋದರರಿಗೂ ವಿಧಾನಸಭೆಯಲ್ಲಿ ಕೋಲಾಹಲವೇ ನಡೆದಿತ್ತು. ಅಂದು ಬಳ್ಳಾರಿಗೆ ಬನ್ನಿ ಎಂದು ರೆಡ್ಡಿ ಸಹೋದರರ ಸವಾಲಿಗೆ ತೋಳು ತಟ್ಟಿದ್ದ ಸಿದ್ದರಾಮಯ್ಯ ಬಳ್ಳಾರಿಗೆ ಪಾದಯಾತ್ರೆ ನಡೆಸೇ ಬಿಟ್ಟಿದ್ದರು.
ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಕಾಂಗ್ರೆಸ್ 2013 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ಬಹುಮುಖ್ಯ ಪಾತ್ರ ನಿರ್ವಹಿಸಿತ್ತು. ಗಣಿ ಧನಿಗಳಾಗಿದ್ದ ರೆಡ್ಡಿ ಬ್ರದರ್ಸ್ ರಾಜಕೀಯ ಹಿನ್ನಡೆಗೂ ಇದು ಕಾರಣವಾಗಿತ್ತು. ಆದರೆ ಇದೀಗ ಅದಕ್ಕೆ ತಿರುಗೇಟು ನೀಡಲು ರೆಡ್ಡಿ ಸಹೋದರರು ತಾಲೀಮು ನಡೆಸುತ್ತಿದ್ದಾರೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಅಂಗ ರಕ್ಷಕರೊಬ್ಬ ಫೈರಿಂಗ್ ಮಾಡಿದ ಸಂದರ್ಭದಲ್ಲಿ ಗುಂಡು ತಾಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಎಂಬಾತ ಮೃತಪಟ್ಟಿದ್ದರು.
ಬಳ್ಳಾರಿಯಲ್ಲಿ ನಡೆದ ಈ ಘಟನೆ ಭಾರೀ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ನನ್ನ ಮೇಲೆ ದಾಳಿ ಮಾಡುವ ಉದ್ದೇಶದಿಂದ ಗಲಾಟೆ ಮಾಡಲಾಗಿದೆ ಎಂದು ಜನಾರ್ದನ ರೆಡ್ಡಿ ಆರೋಪ ಮಾಡಿದ್ದರು. ಗಲಾಟೆ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಜನಾರ್ದನ ರೆಡ್ಡಿ, ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಮಾಜಿ ಶಾಸಕ ಶ್ರೀರಾಮುಲು ಅವರನ್ನು ಕೊಲ್ಲುವ ಉದ್ದೇಶದೊಂದಿಗೆ ಬ್ಯಾನರ್ ವಿಚಾರ ಮುಂದಿಟ್ಟುಕೊಂಡು ದಾಳಿ ಮಾಡಿದ್ದ ಎಂದು ಆರೋಪಿಸಿದ್ದರು. ಅಲ್ಲದೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದ. ಈಗ ಬಿಟ್ಟರೆ ಮುಂದೆ ಸಿಗುವುದಿಲ್ಲ, ಹೊಡೆಯಿರಿ’ ಎಂದು ದಾಳಿಗೆ ಕರೆ ಕೊಟ್ಟಿದ್ದ ಎಂದು ಆರೋಪಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆ ಮುಂದಿಟ್ಟುಕೊಂಡು ಪಾದಯಾತ್ರೆಗೆ ಚಿಂತನೆ ನಡೆಯುತ್ತಿರೆ. ಜನವರಿ 17 ರಂದು ಬಳ್ಳಾರಿಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಪಾದಯಾತ್ರೆಯ ಬಗ್ಗೆ ನಿರ್ಧಾರ ಆಗುತ್ತಾ? ಎಂಬ ಕುತೂಹಲ ಕೆರಳಿಸಿದೆ. ಇನ್ನು ಬಳ್ಳಾರಿ ಗಲಾಟೆ ವಿಚಾರವಾಗಿ ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲು ಸಿದ್ದತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಶಾಸಕ ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಮಾಜಿ ಶಾಸಕ ಶ್ರೀರಾಮುಲು ಜೊತೆಗೂ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆ ಬಳಿಕ ಪಾದಯಾತ್ರೆ ಹಮ್ಮಿಕೊಳ್ಳುವ ಬಗ್ಗೆ ನಿರ್ದಿಷ್ಟ ಮಾಹಿತಿ ಲಭ್ಯ ಆಗಲಿದೆ.
ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…
ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…
ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…
ಹನೂರು : ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನೋರ್ವ ಗಂಭೀರವಾಗಿ ಕೈಗೊಂಡಿರುವ…
ಹನೂರು : ನೆಮ್ಮದಿಯಾಗಿ ವಾಸಿಸಲು ಸ್ವಂತ ಸೂರಿಲ್ಲ, ಜೀವನೋಪಯಕ್ಕಾಗಿ ವೃದ್ಯಾಪ್ಯ ವೇತನವಿಲ್ಲ. ವಿಳಾಸಕ್ಕಾಗಿ ಆಧಾರ್ ಕಾರ್ಡ್ ಇಲ್ಲ. ತುತ್ತು ಅನ್ನಕ್ಕಾಗಿ…