ಶಿವಮೊಗ್ಗ : ಸೆಲ್ಫಿ ಫೋಟೋ ತೆಗೆದುಕೊಳ್ಳಲು ಹೋಗಿ ಫಾಲ್ಸ್ ನಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಬಳಿಯ ಅಬ್ಬಿ ಫಾಲ್ಸ್ ನಲ್ಲಿ ನಡೆದಿದೆ.
12 ಯುವಕರ ತಂಡ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರವಾಸಕ್ಕೆಂದು ಬಂದಿದ್ದಾರೆ. ಈ ಪೈಕಿ ಬಳ್ಳಾರಿ ಮೂಲದ ವಿನೋದ್ (26) ಎಂಬಾತ ಫಾಲ್ಸ್ ನಲ್ಲಿ ಸೆಲ್ಫಿ ಕ್ಕಿಕ್ಕಿಸಿಕೊಳ್ಳಲು ಹೋಗಿದ್ದಾನೆ. ಈ ವೇಳೆ ಕಾಲು ಜಾರಿ ಬಿದ್ದು ನೀರು ಪಾಲಾಗಿದ್ದಾನೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ವಿನೋದ್ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.