Mysore
28
light rain

Social Media

ಬುಧವಾರ, 25 ಜೂನ್ 2025
Light
Dark

ಮೇ.21ರಂದು ಇಡೀ ದಿನ ಬೆಂಗಳೂರು ನಗರ ಪ್ರದಕ್ಷಿಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಡಿದ್ದು ಇಡೀ ದಿನ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೇ.21ರಂದು ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ಕೊಡಲಾಗುವುದು ಎಂದರು.

ನಗರದಲ್ಲಿ ರಾಜಕಾಲುವೆಗಳು ಒತ್ತುವರಿಯಾಗಿದ್ದು, ಚರಂಡಿಗಳು ಆಳವಿಲ್ಲದೆ ಚಿಕ್ಕದಾಗಿರುವುದಲ್ಲದೆ ಹೂಳು ತುಂಬಿದೆ. ಇದನ್ನು ತೆರವು ಮಾಡಲು ನಗರಪಾಲಿಕೆಯವರಿಗೆ ಅನೇಕ ಬಾರಿ ಸೂಚನೆ ನೀಡಲಾಗಿದ್ದು, ಇನ್ನೂ ಕಾಮಗಾರಿಗಳು ನಡೆಯುತ್ತಿವೆ ಎಂದರು.

ಇನ್ನು ವೈಟ್ ಫೀಲ್ಡ್‌ನಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಸರ್ಕಾರದ ವತಿಯಿಂದ 5 ಲಕ್ಷ ರೂಗಳ ಪರಿಹಾರವನ್ನು ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇನ್ನು ಮರಗಳನ್ನು ಕೂಡಲೇ ತೆರವು ಮಾಡಲು ಖಾಯಂ ತಂಡಗಳಿವೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

Tags:
error: Content is protected !!