ಬೆಂಗಳೂರು: ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಇಂದು ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ನಾಡಿದ್ದು ಇಡೀ ದಿನ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೇ.21ರಂದು ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಲಾಗುವುದು. ಅಧಿಕಾರಿಗಳು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ಕೊಡಲಾಗುವುದು ಎಂದರು.
ನಗರದಲ್ಲಿ ರಾಜಕಾಲುವೆಗಳು ಒತ್ತುವರಿಯಾಗಿದ್ದು, ಚರಂಡಿಗಳು ಆಳವಿಲ್ಲದೆ ಚಿಕ್ಕದಾಗಿರುವುದಲ್ಲದೆ ಹೂಳು ತುಂಬಿದೆ. ಇದನ್ನು ತೆರವು ಮಾಡಲು ನಗರಪಾಲಿಕೆಯವರಿಗೆ ಅನೇಕ ಬಾರಿ ಸೂಚನೆ ನೀಡಲಾಗಿದ್ದು, ಇನ್ನೂ ಕಾಮಗಾರಿಗಳು ನಡೆಯುತ್ತಿವೆ ಎಂದರು.
ಇನ್ನು ವೈಟ್ ಫೀಲ್ಡ್‌ನಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಸರ್ಕಾರದ ವತಿಯಿಂದ 5 ಲಕ್ಷ ರೂಗಳ ಪರಿಹಾರವನ್ನು ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇನ್ನು ಮರಗಳನ್ನು ಕೂಡಲೇ ತೆರವು ಮಾಡಲು ಖಾಯಂ ತಂಡಗಳಿವೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…