ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ಬುಧವಾರ ನಡೆದಿದೆ.
ಜಯದೇವ ಡೇರಿ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದ್ದಾರೆ. ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್ ಈ ಕೃತ್ಯವೆಸಗಿದ್ದಾರೆ.
ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ನ ಬಳಿ ತಡೆದು ಹಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂಗೆ ಹಣ ಹಾಕಲೆಂದು GJ 01 HT 9173 ಸಂಖ್ಯೆ ವಾಹನ ಹಣ ತುಂಬಿಕೊಂಡು ತೆರಳುತ್ತಿತ್ತು.
ಇದನ್ನೂ ಓದಿ:-ಜಾನುವಾರಕ್ಕೆ ಮೇವು ಕತ್ತರಿಸುವಾಗ ವಿದ್ಯುತ್ ಸ್ಪರ್ಶ : ರೈತ ಸಾವು
ಈ ವೇಳೆ ಜಯದೇವ ಡೇರಿ ಸರ್ಕಲ್ನಲ್ಲಿ ಇನ್ನೋವಾದಲ್ಲಿ ಬಂದ ದುಷ್ಕರ್ಮಿಗಳು ಎಟಿಎಂ ವಾಹನ ತಡೆದು ಗನ್ ಮ್ಯಾನ್ ಸೇರಿದಂತೆ ಉಳಿದವರನ್ನೆಲ್ಲ ಅಲ್ಲೇ ಇಳಿಸಿ ವಾಹನ ಸಮೇತ ಚಾಲಕನನ್ನು ಡೇರಿ ಸರ್ಕಲ್ಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಡೇರಿ ಸರ್ಕಲ್ ಫ್ಲೈಓವರ್ ಮೇಲೆ ನಿಲ್ಲಿಸಿ ವಾಹನದಲ್ಲಿದ್ದ ಹಣವನ್ನು ಇನ್ನೋವಾ ಕಾರಿಗೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಸುದ್ದಗುಂಟೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…