ರಾಜ್ಯ

ಬೆಂಗಳೂರು: ಮತ್ತೇರಿಸುವ ಔಷಧಿ ನೀಡಿ ಯುವತಿ ಮೇಲೆ ಅತ್ಯಾಚಾರ, ಜಾತಿ ನಿಂದನೆ ಆರೋಪ

ಬೆಂಗಳೂರು: ಯುವತಿಗೆ ಮತ್ತೇರಿಸುವ ಔಷಧ ನೀಡಿ ಅತ್ಯಾಚಾರ ಎಸಗಿದ್ದಲ್ಲದೆ, ವಿಡಿಯೊ ಚಿತ್ರೀಕರಣ ಮಾಡಿಕೊಂಡು ಬೆದರಿಸಿ, ಜಾತಿ ನಿಂದನೆ ಮಾಡಿರುವ ಆರೋಪ ಸಂಬಂಧ ಇಲ್ಲಿನ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಷಕಿ ಆಗಿರುವ 26 ವರ್ಷದ ಯುವತಿ, 2019 ರಲ್ಲಿ ಆರ್.ಟಿ ನಗರದ ಖಾಸಗಿ ಬ್ಯಾಂಕ್‌ವೊಂದರ ಕ್ರಿಡಿಟ್‌ ಕಾರ್ಡ್‌ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆಗ ಆರೋಪಿ ಲಕ್ಷ್ಮೀರೆಡ್ಡಿಯ ಪರಿಚಯವಾಗಿತ್ತು.

ಆಂಧ್ರಪ್ರದೇಶ ಮೂಲದ ಆರೋಪಿ ಲಕ್ಷ್ಮೀರೆಡ್ಡಿ, 2019ರ ನವೆಂಬರ್‌ನಲ್ಲಿ ತನ್ನ ಸಹೋದರಿಯ ಹುಟ್ಟುಹಬ್ಬದ ಕಾರ್ಯಕ್ರಮವಿದೆ ಎಂದು ಆರ್.ಟಿ ನಗರದ ರೆಸಿಡೆನ್ಸಿಯೊಂದಕ್ಕೆ ಆಹ್ವಾನ ನೀಡಿ, ಚಹಾದಲ್ಲಿ ಮತ್ತು ಬರುವ ಔಷಧಿ ಬೆರಸಿ, ಕುಡಿಸಿ ಅತ್ಯಾಚಾರ ಮಾಡಿದ್ದಾನೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.

ಕೃತ್ಯದ ವಿಡಿಯೊ ಚಿತ್ರೀಕರಿಸಿಕೊಂಡಿದ್ದ ಆರೋಪಿ, ನಂತರದ ದಿನಗಳಲ್ಲಿ ತನಗೆ ಬೆದರಿಸಿ ನಿರಂತರವಾಗಿ ಲೈಂಗಿನ ಶೋಷಣೆಗೈದಿದ್ದಾನೆ. ತನ್ನ ಜಾತಿ ಹಾಗೂ ತಾಯಿಯ ಕುರಿತು ಕೀಳು ಭಾಷೆಯಲ್ಲಿ ನಿಂದಿಸಿದ್ದು, ಯುವತಿ ಮನೆಯಲ್ಲಿದ್ದ ಅಂಬೇಡ್ಕರ್‌ ಅವರ ಫೋಟೋ ತೆಗೆದು ಹಾಕುವಂತೆ ಕಿರುಕುಳ ನೀಡಿದ್ದಾನೆ. ಮೊಬೈಲ್‌ ಫೋನಿನ ವಾಲ್‌ಪೇಪರ್‌ನಲ್ಲಿದ್ದ ಅಂಬೇಡ್ಕರ್‌ ಅವರ ಫೋಟೊ ತೆಗೆದುಹಾಕುವಂತೆ ಬೆದರಿಸಿ ಮೊಬೈಲ್‌ ಒಡೆದು ಹಾಕಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ಬಟ್ಟೆ ಹರಿದುಹಾಕಿ ಸಾಯಿಸುತ್ತೇನೆ ಎಂದು ಬೆದರಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತ ಯವತಿ ದೂರು ನೀಡುತ್ತದ್ದಂತೆ ಆರೋಪಿ ಮೊಬೈಲ್‌ ಫೋನ್‌ ಸ್ವಿಷ್‌ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

4 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

4 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

5 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

5 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

6 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

6 hours ago