Mysore
18
clear sky

Social Media

ಮಂಗಳವಾರ, 18 ಫೆಬ್ರವರಿ 2025
Light
Dark

ಬೆಂಗಳೂರು: ಬ್ಯಾಂಕಾಕ್‌ನಿಂದ ಬಂದಿದ್ದ 23ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ 23ಕೋಟಿ ಮೌಲ್ಯದ ಗಾಂಜಾವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಸೀಜ್‌ ಮಾಡಿದ್ದಾರೆ.

ಬ್ಯಾಂಕಾಕ್‌ ನಿಂದ ಬೆಂಗಳೂರಿಗೆ ಅಕ್ರಮವಾಗಿ ತಂದಿದ್ದ 23ಕೋಟಿ ಮೌಲ್ಯದ ಗಾಂಜಾವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹೈಡ್ರೋಪೋನಿಕ್ಸ್‌ ಗಾಂಜಾ, ವೈರವಾನ್‌ ಗಾಂಜಾ ಹೂ ಸೇರಿದಂತೆ ವಿವಿಧ ಬಗೆಯ ಗಾಂಜಾ ಪತ್ತೆಯಾಗಿದೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಹುಕೋಟಿ ಮೌಲ್ಯದ ಮಾದಕ ವಸ್ತು ಬರುತ್ತಿತ್ತು.

ಮೂವರು ಆರೋಪಿಗಳು ಲಗೇಜ್‌ ಬ್ಯಾಗ್‌ನಲ್ಲಿ ತುಂಬಿಕೊಂಡು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಪರಿಶೀಲನೆ ವೇಳೆ ಗಾಂಜಾ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ. ಮಾರುಕಟ್ಟೆಯಲ್ಲಿ ಹೈಡ್ರೋಪೋನಿಕ್‌ ಗಾಂಜಾಗೆ ಹೆಚ್ಚು ಬೆಲೆ ಇದೆ.

ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: