ರಾಜ್ಯ

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ಮಾಡಲಾಗಿತ್ತು. ಇದು ಕೇರಳ ಸಿಎಂ ವರೆಗೂ ತಲುಪಿ ಅವರು ಈ ಕೃತ್ಯವನ್ನುಬುಲ್ಡೋಜರ್‌ ರಾಜ್‌ ಎಂದು ಟ್ವೀಟ್‌ ಮೂಲಕ ಕುಟುಕಿದ್ದರು. ಬಳಿಕ ಈ ವಿಷಯ ಕಾಂಗ್ರೆಸ್‌ ಹೈಕಮಾಂಡ್‌ ಅಂಗಳಕ್ಕೂ ತಲುಪಿತ್ತು.

ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸಭೆ ನಡೆಸಿದ್ದು, ಕೋಗಿಲು ಬಡಾವಣೆಯ ಅರ್ಹರಿಗೆ 7 ಕಿ.ಮೀ ವ್ಯಾಪ್ತಿಯಲ್ಲೇ ಬದಲೀ ಮನೆ ಕೊಡಲು ತೀರ್ಮಾನ ಮಾಡಿದ್ದಾರೆ.

ಸಿಎಂ ಸಭೆಯ ಇತರೆ ಸೂಚನೆಗಳು ಇಂತಿವೆ
ಕೋಗಿಲು ಬಡಾವಣೆಯಲ್ಲಿ ಡಿಸೆಂಬರ್ 20ರಂದು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ಗಳನ್ನು ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಅವರು ಖಾಲಿ ಮಾಡಿರಲಿಲ್ಲ. ನಿನ್ನೆ ನಾನು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕೂಡ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ‌ ಅವರ ಸ್ವಾಧೀನದಲ್ಲೇ ಇದೆ. ನಾವು ಸುಮಾರು 2020-21 ರಿಂದ ಈ ರೀತಿ ಅಕ್ರಮವಾಗಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದರು, ಹೀಗಾಗಿ ಅಲ್ಲಿನ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಶಿಲ್ದಾರರಿಗೆ, ಶಿರಸ್ಥೆದಾರರಿಗೆ ಗೊತ್ತಿಲ್ಲದೆ ಹೀಗೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನುಮುಂದೆ ಇಂತಹ ಘಟನೆ ಮರುಕಳಿಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂಬ ಎಚ್ಚರಿಕೆ ನೀಡಿದರು.

ಇನ್ನುಮುಂದೆ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನಿನ ಅಕ್ರಮ‌ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಒಂದು ವೇಳೆ ಮನೆ ಕಟ್ಟಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುತ್ತದೆ. ಅಕ್ರಮವಾಗಿ ಶೆಡ್‌ಗಳನ್ನು ಕಟ್ಟಿ ವಾಸವಿದ್ದವರಲ್ಲಿ ಮುಂದಿನ ಎರಡು ದಿನಗಳಲ್ಲಿ ಅರ್ಹರನ್ನು ಗುರುತಿಸಿ, ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕುವೆಂಪು

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…

1 hour ago

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…

1 hour ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…

1 hour ago

ಓದುಗರ ಪತ್ರ: ಹೊಸ ವರ್ಷ ಆಚರಣೆ: ಇರಲಿ ಸಂಯಮ, ಗುರಿ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…

1 hour ago

ಮಕ್ಕಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಮಹತ್ವ

ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ  ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…

1 hour ago

ಸಾಧನೆಯ ಹಾದಿಯಲ್ಲಿ ಬೆಳೆದು ಬೆಳಗಿದವರು

೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…

1 hour ago