ಬೆಂಗಳೂರು: ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಪಂಜಾಬ್ ಗಡಿಯ ಪಟಿಯಾಲಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಪಂಜಾಬ್ ಗಡಿಯ ಪಟಿಯಾಲ ಬಳಿ ಸಂಭವಿಸಿದ್ದ ಕಾರು ಅಪಘಾತದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು.
ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಏರ್‌ಲಿಫ್ಟ್ ಮಾಡಲು ಕೇಂದ್ರ ಸಚಿವ ವಿ.ಸೋಮಣ್ಣ ಅವರು ಪಟಿಯಾಲ ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಕುರುಬೂರು ಶಾಂತಕುಮಾರ್ ಅವರನ್ನು ಪಂಜಾಬ್‌ನಿಂದ ಬೆಂಗಳೂರಿಗೆ ಏರ್‌ಲಿಫ್ಟ್ ಮಾಡಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಇನ್ನು ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.





