ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಕೆಎಸ್‌ಆರ್‌ಟಿಸಿ ವಾಹನ ಚಾಲಕನೊಬ್ಬ ಮೊಬೈಲ್‌ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿಕೊಂಡು ಬಂದಿರುವವನ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ನಮ್ಮ ಕಣ್ಣಿಂದ ತಪ್ಪಿಸಿಕೊಂಡು ಹೋಗಲು ಸಾಧ್ಯವಿಲ್ಲ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ನಮ್ಮ ಎಲ್ಲಾ ಸಿಸಿಟಿಗಳು ಅಚ್ಚುಕಟ್ಟಾಗಿ ಕೆಲಸ ಮಾಡುತ್ತಿವೆ. ಮೇ.11 ರಂದು ಚೆನ್ನಪಟ್ಟಣ ಬಳಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಕೆಎಸ್‌ಆರ್‌ಟಿಸಿ ವಾಹನ ಚಲಾಯಿಸುತ್ತಿರುವುದನ್ನು ಫೋಟೋ ಸಹಿತ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕೇವಲ 15 ದಿನಗಳಲ್ಲಿ 12,192 ಪ್ರಕರಣ ದಾಖಲಾಗಿವೆ. ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಗಳು ನಡೆದರೆ ಅದನ್ನು ನಿಮ್ಮ ಕುಟುಂಬಗಳು ಸಹಿಸಿಕೊಳ್ಳಲಿವೆಯಾ ಎಂದು ಪ್ರಶ್ನೆ ಮಾಡಿದ್ದಾರೆ.
https://x.com/alokkumar6994/status/1791335347990749618
ಇನ್ನು ಕೆಎಸ್‌ಆರ್‌ಟಿಸಿ ಚಾಲಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಎಂದು ದಂಡ ವಿಧಿಸುವುದನ್ನು ಸಹಿತ ಉಲ್ಲೇಖಿಸಿ ಮೊಬೈಲ್ ಬಳಸಿ ವಾಹನ ಚಲಾಯಿಸುತ್ತಿರುವುದರ ಮಾಹಿತಿಯನ್ನು ಅಲೋಕ್ ಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.