ಬೆಂಗಳೂರು: ಹೊಸ ವರ್ಷಕ್ಕೆ ಇನ್ನೇನು ಒಂದು ತಿಂಗಳು ಮಾತ್ರ ಬಾಕಿಯಿದ್ದು, ಸಿಸಿಬಿ ಪೊಲೀಸರು ಈಗಾಗಲೇ ಅಲರ್ಟ್ ಆಗಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿಗೆ ದೊಡ್ಡ ಮಟ್ಟದಲ್ಲಿ ಮಾದಕ ವಸ್ತುಗಳ ಬರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಬೆಂಗಳೂರು ಸಿಸಿಬಿ ಪೊಲೀಸರು, ನಗರದ ಹೋಟೆಲ್‌ಗಳು, ಹೊರವಲಯದಲ್ಲಿರುವ ಫಾರಂ ಹೌಸ್‌ಗಳು, ರೆಸಾರ್ಟ್‌ಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಇದೆಲ್ಲದರ ಜೊತೆಗೆ ಮುಖ್ಯವಾಗಿ ಏರ್‌ಪೋರ್ಟ್‌ಗಳು, ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು, ಬೇರೆ ರಾಜ್ಯಗಳಿಂದ ನಗರಕ್ಕೆ ಬರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೂಕ್ತ ಗಮನ ಹರಿಸುವಂತೆ ಹಿರಿಯ ಅಧಿಕಾರಿಗಳು ಖಡಕ್ ಸೂಚನೆ ನೀಡಿದ್ದಾರೆ.
ನ್ಯೂಇಯರ್‌ಗೆ ಯಾವುದೇ ನಿಯಮ ಉಲ್ಲಂಘನೆ ಆಗದಂತೆ ಗೈಡ್‌ಲೈನ್ಸ್ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ.
ಒಟ್ಟಾರೆಯಾಗಿ ನ್ಯೂ ಇಯರ್ ಪಾರ್ಟಿಯ ಹೆಸರಿನಲ್ಲಿ ಯಾವುದೇ ರೀತಿಯ ಅನಾಹುತ ಸಂಭವಿಸದಂತೆ ಪೊಲೀಸರು ಈಗಾಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದು ವಿಶೇಷವೆನಿಸಿದೆ.