ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ.
ಪ್ರಸಕ್ತ ಸಾಲಿನ (2025)ಲ್ಲಿ ನಗರ ಪೊಲೀಸರು ಒಟ್ಟು 1078 ಎನ್‍ಡಿಪಿಎಸ್ ಪ್ರಕರಣಗಳನ್ನು ದಾಖಲಿಸಿ 1491 ಭಾರತೀಯ ಪ್ರಜೆಗಳು ಹಾಗೂ 52 ವಿದೇಶಿ ಪ್ರಜೆಗಳನ್ನು ಬಂಧಿಸಿ 160 ಕೋಟಿ ರೂ. ಮೌಲ್ಯದ 1,44675 ಕಿ.ಗ್ರಾಂ ಮಾದಕದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ಸಾಲಿಗೆ ಹೋಲಿಸಿದರೆ ನಗರ ಪೊಲೀಸರು ಮಾದಕದ್ರವ್ಯ ಕಳ್ಳಸಾಗಾಟ ಸೇವನೆ ಹಾಗೂ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲಾಗಿದೆ. ಈ ನಡುವೆ ಮಾದಕದ್ರವ್ಯ ಮಾರಾಟ ದಂದೆಯಲ್ಲಿ ತೊಡಗಿದ್ದ ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ.





