ರಾಜ್ಯ

ಬೆಂಗಳೂರು ಮಳೆ ಅವಾಂತರ : ಸಿಎಂ, ಡಿಸಿಎಂ ಸಿಟಿ ರೌಂಡ್ಸ್‌

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಭಾರಿ ಮಳೆಯಿಂದಾಗಿ ತತ್ತರಿಸಿ ಹೋಗಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಬುಧವಾರ ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಕಲೆಹಾಕಿದರು.

ಸಿಟಿ ರೌಂಡ್ಸ್‌ ವೇಳೆ ಹಲವೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು.

ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು.

ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು‌ ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.

ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.

HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಣೆ ಮಾಡಿದ ಸಿಎಂ, ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು.

ಬಾದಿತ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.

ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿ…
ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ.

ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು.

ನೆನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ BDA ಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.

ಸಾಯಿ ಲೇಔಟ್
ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಮುಖ್ಯಮಂತ್ರಿಗಳು, “ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ” ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು.

ಬಳಿಕ‌ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

1 hour ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

2 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

2 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

3 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

3 hours ago