CM and DCM
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಭಾರಿ ಮಳೆಯಿಂದಾಗಿ ತತ್ತರಿಸಿ ಹೋಗಿದೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬುಧವಾರ ನಗರ ಪ್ರದಕ್ಷಿಣೆ ಹಾಕಿ ಮಾಹಿತಿ ಕಲೆಹಾಕಿದರು.
ಸಿಟಿ ರೌಂಡ್ಸ್ ವೇಳೆ ಹಲವೆಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕದಲ್ಲಿ ರಾಜ ಕಾಲುವೆ ಒತ್ತುವರಿ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸುವಂತೆ ಸೂಚಿಸಿದರು.
ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ಅಧಿಕಾರಿಗಳು ವಿವರಿಸಿದರು.
ಈ ವೇಳೆ ನೋಟಿಸ್ ಕೊಟ್ಟಿಲ್ಲವೇ, ಒತ್ತುವರಿ ಆಗಿರುವುದನ್ನು ನೋಡಿಕೊಂಡು ಕುಳಿತಿದ್ದೀರಾ ಎಂದು ಸಿಎಂ ಖಾರವಾಗಿ ಪ್ರಶ್ನಿಸಿದರು.
ಬಳಿಕ ಎಷ್ಟೇ ದೊಡ್ಡ ಬಿಲ್ಡರ್ ಆಗಿದ್ದರೂ ಮುಲಾಜು ನೋಡಬೇಡಿ, ರಾಜಕಾಲುವೆ ಒತ್ತುವರಿ ತೆರವುಗೊಳಿಸಿ ಎಂದು ಸ್ಪಷ್ಟ ಸೂಚನೆ ನೀಡಿದರು.
HBR ಲೇಔಟ್, ತುಂಬಿ ಹರಿಯುತ್ತಿರುವ ರಾಜಕಾಲುವೆ ಪ್ರದೇಶ ವೀಕ್ಷಣೆ ಮಾಡಿದ ಸಿಎಂ, ರಾಜಕಾಲುವೆಯ ಹರಿವಿನ ಹಾದಿಯಲ್ಲಿ ರೈಲ್ವೇ ಟ್ರಾಕ್ ಇರುವ ಕಡೆ ಆಗಿರುವ ಬಾಟಲ್ ನೆಕ್ ಸರಿ ಪಡಿಸಲು, ವಿಸ್ತರಿಸಲು ಸೂಚನೆ ನೀಡಿದರು.
ಬಾದಿತ ಪ್ರದೇಶಗಳಲ್ಲಿ Basement ಪಾರ್ಕಿಂಗ್, ಕೆಳ ಹಂತದಲ್ಲಿ ಮನೆ ನಿರ್ಮಾಣಕ್ಕೆ ಅವಕಾಶ ನೀಡದಂತೆ town planning ನಲ್ಲಿ ಬದಲಾವಣೆ ತರುವ ದಿಕ್ಕಿನಲ್ಲಿ ಸೂಚನೆ ನೀಡಿದರು.
ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿ…
ರಾಜಕಾಲುವೆ ವಿಸ್ತೀರ್ಣ 29 ಮೀಟರ್. ಆದರೆ ಗೆದ್ದಲಹಳ್ಳಿಯ ಕಾಲುವೆ ಬಾಟಲ್ ನೆಕ್ ಇದ್ದು ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ ಹರಿದು ಬರುವ ನೀರು ಈ ಬಾಟಲ್ ನೆಕ್ ನಲ್ಲಿ over flow ಆಗಿ ಸಾಯಿ ಲೇಔಟ್ ಗೆ ನುಗ್ಗುತ್ತದೆ ಎನ್ನುವುದು ಸಮಸ್ಯೆ.
ಆದ್ದರಿಂದ 8 ಮೀಟರ್ ಬಾಟಲ್ ನೆಕ್ ಇರುವ ರೈಲ್ವೇ ವೆಂಟ್ ಅನ್ನು ವಿಸ್ತರಿಸಲು ಸೂಚನೆ ನೀಡಲಾಯಿತು.
ನೆನ್ನೆ ದಿನ ರೈಲ್ವೇಯವರು ಈ ವೆಂಟ್ ವಿಸ್ತರಣೆಗೆ BDA ಗೆ ಅನುಮತಿ ನೀಡಿದ್ದಾರೆ. ಜೊತೆಗೆ ಕಾಲುವೆ ನಿರ್ವಹಣೆ ಮಾಡದ ಗುತ್ತಿಗೆದಾರರಿಂದ ವಿವರಣೆ ಕೇಳುವಂತೆ ಸೂಚಿಸಲಾಯಿತು.
ಸಾಯಿ ಲೇಔಟ್
ಮಳೆ ಮತ್ತು ಪ್ರವಾಹ ಪೀಡಿತ ಸ್ಥಳ ವೀಕ್ಷಿಸಿದ ಮುಖ್ಯಮಂತ್ರಿಗಳು, “ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ” ಪದಾಧಿಕಾರಿಗಳು ಮತ್ತು ಸದಸ್ಯರಿಂಸ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದರು.
ಬಳಿಕ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗಂಭೀರ ಗಮನ ಹರಿಸಿ ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…