Mysore
21
overcast clouds

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಬೆಂಗಳೂರು: ಜ.23ರಂದು 117 ಕೇಂದ್ರಗಳಲ್ಲಿ ಪಿಎಸ್​ಐ ಮರು ಪರೀಕ್ಷೆ

ಬೆಂಗಳೂರು: ನಗರದ 117 ಪರೀಕ್ಷಾ ಕೇಂದ್ರಗಳಲ್ಲಿ ಜ.23ರಂದು ಪಿಎಸ್‌ಐ (ಸಿವಿಲ್- ಪುರುಷ ಹಾಗೂ ಮಹಿಳಾ) ನೇಮಕಾತಿಗೆ ಮರು ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಮುತ್ತಲ 200 ಮೀಟ‌ರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.

ಪಿಎಸ್​ಐ ಮರು ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಲಿದ್ದು, ಒಟ್ಟು 117 ಕೇಂದ್ರಗಳಲ್ಲಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಅಂದು ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್‌ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

545 ಪಿಎಸ್​ಐ ಮರು ಪರೀಕ್ಷೆಗೆ ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ತಯಾರಿಗಳನ್ನು ನಡೆಸುತ್ತಿದ್ದು, ಇದರ ನಡುವೆ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿತ್ತು. ಈ ಸಂಬಂಧ ಇಂಟೆಲಿಜೆನ್ಸ್ ವಿಭಾಗದ ಸಬ್​ ಇನ್ಸ್​ಪೆಕ್ಟರ್​ ಆಗಿರುವ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.

ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು, ಇನ್ಸ್​ಪೆಕ್ಟರ್​ ಲಿಂಗಯ್ಯ ಅವರನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ