ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಗುಪ್ತಚರ ಇಲಾಖೆ ಮುಖ್ಯಸ್ಥರನ್ನು ಎತ್ತಂಗಡಿ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರ ಆಯುಕ್ತ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಈ ಬೆನ್ನಲ್ಲೇ ಇದೀಗ ಗುಪ್ತಚರ ಇಲಾಖೆ ಇಲಾಖೆ ವೈಫಲ್ಯ ಕಾರಣ ಎನ್ನುವ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರವು ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.





